Thursday, December 9, 2021

ಅಮೆರಿಕದಲ್ಲೇ ಸಿಲುಕಿರುವ ಮುಖ್ಯ ಚುನಾವಣಾ ಆಯುಕ್ತ ಅರೋರಾ!

Follow Us

ನವದೆಹಲಿ: ಕೊರೋನಾದಿಂದ ದೇಶದ ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ಅಮೆರಿಕದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ.
ವೈಯಕ್ತಿಕ ಕೆಲಸಕ್ಕೆಂದು ಮಾರ್ಚ್ 10ರಂದು ಅಮೆರಿಕಕ್ಕೆ ತೆರಳಿದ್ದ ಸುನೀಲ್ ಅರೋರಾ ಲಾಕ್ ಡೌನ್ ನಿಂದಾಗಿ ಭಾರತಕ್ಕೆ ವಾಪಸ್ ಮರಳಲಾಗದೆ ಅಮೆರಿಕದಲ್ಲಿಯೇ ಸಿಲುಕಿ ಪರದಾಡುವ ಸ್ಥಿತಿಯಲ್ಲಿದ್ದಾರೆ.
ಕೊರೋನಾ ನಿಯಂತ್ರಣ ಸಂಬಂಧ ಭಾರತದಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಯಿತು. ಅಲ್ಲದೇ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವನ್ನೂ ನಿರ್ಬಂಧಿಸಲಾಯಿತು. ಏಪ್ರಿಲ್ 4ರಂದು ತಮ್ಮ ಖಾಸಗಿ ಕೆಲಸ ಮುಗಿಸಿಕೊಂಡು ಹಿಂದಿರುಗಬೇಕಾಗಿದ್ದ ಸುನೀಲ್ ಅರೋರಾ ವಿಮಾನ ಸಂಚಾರವಿಲ್ಲದೆ ಅಮೆರಿಕದಲ್ಲಿಯೇ ಇರುವಂತಾಗಿದೆ.
ಅಮೆರಿಕದಿಂದಲೇ ಕಚೇರಿ ಕೆಲಸಗಳಿಗಾಗಿ ವೀಡಿಯೋ ಕಾನ್ಫರೆನ್ಸ್ ಮೂಲಕ ಸದಾ ಸಂಪರ್ಕದಲ್ಲಿರುವ ಅವರು, ಅಲ್ಲಿಂದಲೇ ಕಚೇರಿ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!