Monday, September 27, 2021

ಕೃಷ್ಣಾ ನದಿ ನೀರು ಹಂಚಿಕೆ ವಿವಾದ: ತಾವು ವಿಚಾರಣೆ ನಡೆಸುವುದಿಲ್ಲವೆಂದ ಸುಪ್ರೀಂ ಕೋರ್ಟ್ ಸಿಜೆಐ

Follow Us

newsics.com
ಆಂಧ್ರಪ್ರದೇಶ /ನವದೆಹಲಿ: ಕೃಷ್ಣಾ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಪಟ್ಟು ತಾವು ವಿಚಾರಣೆ ನಡೆಸುವುದಿಲ್ಲವೆಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್​.ವಿ.ರಮಣ ಹೇಳಿದ್ದಾರೆ.

ಆಂಧ್ರಪ್ರದೇಶ ವಿಭಜನೆಯಾದಾಗಿನಿಂದ ತೆಲಂಗಾಣದೊಂದಿಗೆ ಕೃಷ್ಣಾ ನದಿ ನೀರು ಹಂಚಿಕೆ ವಿವಾದ ಆರಂಭವಾಗಿತ್ತು.
ಇದೀಗ ಸುಪ್ರೀಂ ಸಿಜೆಐ ನಾನು ಎರಡೂ ರಾಜ್ಯಗಳಿಗೆ ಸೇರಿದ್ದೇನೆ. ಹಾಗಾಗಿ ಕಾನೂನು ಬದ್ಧವಾಗಿ ನಾನು ಈ ವಿಚಾರಣೆ ಕೈಗೆತ್ತಿಕೊಳ್ಳುವುದಿಲ್ಲ. ಮಧ್ಯಸ್ಥಿಕೆ ಮೂಲಕ ಎರಡೂ ರಾಜ್ಯಗಳು ಈ ವಿಚಾರವನ್ನು ಬಗೆಹರಿಸಿಕೊಳ್ಳಲು ಸಾಧ್ಯವಾದರೆ, ಅದನ್ನೇ ಮಾಡಿ. ನಾವು ಅದಕ್ಕೆ ಸಹಕಾರ ನೀಡುತ್ತೇವೆ. ಹಾಗೊಮ್ಮೆ ವಿಚಾರಣೆ ನಡೆಸಲೇಬೇಕು ಎಂದರೆ ಪ್ರಕರಣವನ್ನು ಸುಪ್ರೀಂಕೋರ್ಟ್​ನ ಮತ್ತೊಂದು ಪೀಠಕ್ಕೆ ನಾನು ವರ್ಗಾಯಿಸುತ್ತೇನೆ ಎಂದಿದ್ದಾರೆ.
ಎರಡೂ ರಾಜ್ಯಗಳ ನಡುವೆ ನಡೆದ ಒಪ್ಪಂದ ಉಲ್ಲಂಘಿಸಿ ತೆಲಂಗಾಣ ವಿದ್ಯುತ್​ ಉತ್ಪಾದನಾ ಅವಶ್ಯಕತೆಗಳಿಗಾಗಿ, ಕೃಷ್ಣಾ ನದಿ ನೀರನ್ನು ಅತಿಯಾಗಿ ಬಳಸಿಕೊಳ್ಳುತ್ತಿದ್ದು, ನೀರಾವರಿ ಯೋಜನೆ ಮೇಲೆ ದೊಡ್ಡ ಹೊಡೆತ ಬಿದ್ದಿದೆ ಎಂದು ಆಂಧ್ರಪ್ರದೇಶ ಆರೋಪಿಸಿದೆ.

 

50,000 ಚದರ ಅಡಿ ಜಾಗದಲ್ಲಿ ಸೋನು ಸೂದ್ ಭಾವಚಿತ್ರ ರಚಿಸಿದ ಅಭಿಮಾನಿ

ಮತ್ತಷ್ಟು ಸುದ್ದಿಗಳು

Latest News

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ: ಇಬ್ಬರು ಟೆಕ್ಕಿಗಳ ಸಾವು

newsics.com ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಟೆಕ್ಕಿಗಳು ಅಸುನೀಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಫೇಸ್ 1 ಹಾಗೂ ಫೇಸ್ 2 ಬೆಸೆಯುವ ಲಿಂಕ್...

ಹೊಸ ಸಂಸತ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ

newsics.com ನವದೆಹಲಿ: ಪ್ರಧಾನಿ ನರೇಂದ್ರ‌ ಮೋದಿ ಭಾನುವಾರ ರಾತ್ರಿ ಹೊಸ ಸಂಸತ್‌ ಕಟ್ಟಡದ‌ ನಿರ್ಮಾಣ ಸ್ಥಳಕ್ಕೆ ದಿಢೀರ್ ಭೇಟಿ‌ ನೀಡಿದರು. ಅಮೆರಿಕದಿಂದ ಹಿಂದಿರುಗಿ 24 ಗಂಟೆಗಿಂತಲೂ ಮುಂಚೆ ಪ್ರಧಾನಿ ಮೋದಿ ಭಾನುವಾರ ರಾತ್ರಿ 8: 45...

ಮುಂಬೈ ವಿರುದ್ಧ ರಾಯಲ್ ಚಾಲೆಂಜರ್ಸ್’ಗೆ 54 ರನ್’ಗಳ ಭರ್ಜರಿ ಜಯ

newsics.com ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಲ್ ಪಂದ್ಯದಲ್ಲಿ 54 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ನಾಯಕ ವಿರಾಟ್ ಕೊಹ್ಲಿ (51) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್...
- Advertisement -
error: Content is protected !!