ತಿರುಪತಿ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದು ತಿರುಪತಿ ತಿಮ್ಮಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿದರು. ಮುಂಜಾನೆ ದೇವಸ್ಥಾನಕ್ಕೆ ಭೇಟಿ ನೀಡಿದ ಯಡಿಯೂರಪ್ಪ ಏಳು ಬೆಟ್ಟಗಳ ಒಡೆಯ ಶ್ರೀನಿವಾಸನ ಮುಂದೆ ಭಕ್ತಿಯಿಂದ ಪ್ರಾರ್ಥನೆ ಮಾಡಿದರು..
ತಿರುಮಲದಲ್ಲಿ ನಿರ್ಮಿಸಲಾಗುತ್ತಿರುವ ಕರ್ನಾಟಕ ಭವನದ ಭೂಮಿ ಪೂಜೆಯಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ತಿರುಪತಿಗೆ ಆಗಮಿಸಿದ್ದಾರೆ. ಆಂಧ್ರಪ್ರದೇಶ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು