Tuesday, April 13, 2021

ಸಿಎಂ ಕೇಜ್ರಿವಾಲ್ ಗೆ ಶೀತ ಜ್ವರ- ನಾಳೆ ಕೋವಿಡ್ ಪರೀಕ್ಷೆ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಶೀತ ಮತ್ತು ಜ್ವರದಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ದೆಹಲಿಯಲ್ಲಿ ಮಾರಕ ಕೊರೋನಾ ವ್ಯಾಪಕವಾಗಿ ಹರಡಿರುವ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಕೂಡ ಮುನ್ನೆಚ್ಚರಿಕೆ ವಹಿಸಲು ನಿರ್ಧರಿಸಿದ್ದಾರೆ. ನಾಳೆ ಕೋವಿಡ್- 19 ಪರೀಕ್ಷೆಗೆ ಒಳಪಡಲು ಕೇಜ್ರಿವಾಲ್ ತೀರ್ಮಾನಿಸಿದ್ದಾರೆ ಎಂದು ವರದಿಯಾಗಿದೆ. ಈ ಮಧ್ಯೆ ದೆಹಲಿ ಸರ್ಕಾರ ರಾಜ್ಯದ ಗಡಿಗಳನ್ನು ಸಂಚಾರಕ್ಕೆ ಮುಕ್ತಗೊಳಿಸಿದೆ. ಪ್ರಾರ್ಥನಾ ಮಂದಿರಗಳಲ್ಲಿ  ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಿದೆ. ಇದೇ ವೇಳೆ ದೆಹಲಿಯಲ್ಲಿನ ಆರೋಗ್ಯ ಸೇವೆ ಕೇವಲ ದೆಹಲಿ ನಾಗರಿಕರಿಗೆ ಮಾತ್ರ ಸೀಮಿತ ಎಂಬ ಕೇಜ್ರಿವಾಲ್ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!