Wednesday, July 6, 2022

ಸ್ವಾತಂತ್ರ್ಯ ದಿನದಂದು ಕೆಂಪುಕೋಟೆಗೆ ಮಕ್ಕಳ ಪ್ರವೇಶ ನಿಷೇಧ

Follow Us

ನವದೆಹಲಿ: ಆಗಸ್ಟ್ 15 ರಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಕ್ಕೆ ಮಕ್ಕಳಿಗೆ ಪ್ರವೇಶ ನೀಡದಿರಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.
ಕೋವಿಡ್’‌ನಿಂದ ಮಕ್ಕಳನ್ನು ರಕ್ಷಿಸಬೇಕಾಗಿರುವುದು ಪ್ರಮುಖ ಕರ್ತವ್ಯವಾಗಿರುವುದರಿಂದ ಈ ವರ್ಷ ಮಕ್ಕಳ ಭಾಗವಹಿಸುವಿಕೆಗೆ ನಿರ್ಬಂಧ ಹೇರಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಪ್ರತಿ ವರ್ಷದಂತೆ ಹೆಚ್ಚು ಗಣ್ಯರಿಗೆ ಅವಕಾಶ ನೀಡಲಾಗುತ್ತಿಲ್ಲ. ಪ್ರತಿ ವರ್ಷ 1000ಕ್ಕೂ ಅಧಿಕ ಗಣ್ಯರಿಗೆ ಆಹ್ವಾನ ನೀಡಲಾಗುತ್ತಿತ್ತು. ಈ ಬಾರಿ 250 ಮಂದಿಗೆ ಮಾತ್ರ ಅವಕಾಶ ನೀಡುವ ಸಾಧ್ಯತೆ ಇದೆ. ಅಗತ್ಯವೆನಿಸುವ ಮುನ್ನೆಚ್ಚರಿಕೆ ಕ್ರಮಗಳನ್ನು ಸಹ ತೆಗೆದುಕೊಳ್ಳಲಾಗುವುದು. ಈ ಸಮಾರಂಭದಲ್ಲಿ ಯಾರೆಲ್ಲಾ ಭಾಗವಹಿಸಬೇಕು ಎಂದು ಕೇಂದ್ರ ರಕ್ಷಣಾ ಸಚಿವಾಲಯ ಅಂತಿಮ ಪಟ್ಟಿ ಸಿದ್ಧಪಡಿಸಲಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಲಿಂಗಾಯಿತ ಸಂಪ್ರದಾಯದಂತೆ ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ

newsics.com ಹುಬ್ಬಳ್ಳಿ:  ದುಷ್ಕರ್ಮಿಗಳ ದಾಳಿಯಿಂದ ಮೃತಪಟ್ಟಿರುವ ಸರಳ ವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಅಂತ್ಯಕ್ರಿಯೆಗೆ ಸಿದ್ದತೆ ಮಾಡಲಾಗಿದೆ. ಲಿಂಗಾಯಿತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ. ಇಬ್ಬರು ಸ್ವಾಮೀಜಿಗಳು...

ರಷ್ಯಾ ಕ್ಷಿಪಣಿ ದಾಳಿಗೆ ಬ್ರೆಜಿಲ್ ಮಾಡೆಲ್ ಸಾವು

newsics.com ಮಾಸ್ಕೋ: ಉಕ್ರೇನ್  ವಿರುದ್ಧ ರಷ್ಯಾ ನಡೆಸುತ್ತಿರುವ ಹೋರಾಟದಲ್ಲಿ ಬ್ರೆಜಿಲ್ ನ ರೂಪದರ್ಶಿಯೊಬ್ಬರು ಮೃತಪಟ್ಟಿದ್ದಾರೆ. ಸಾವನ್ನಪ್ಪಿರುವ ರೂಪದರ್ಶಿಯನ್ನು  ಬ್ರೆಜಿಲ್ ನ  ಥಾಲಿತಾ ಡೂ ವಲ್ಲೆ ಎಂದು ಗುರುತಿಸಲಾಗಿದೆ. ಥಾಲಿತಾ  ಉಕ್ರೇನ್ ಪರವಾಗಿ ಹೋರಾಟ ಮಾಡುತ್ತಿದ್ದರು. ಬಂದೂಕು ಬಳಕೆಯಲ್ಲಿ...

ಚಾಕಲೇಟ್ ಕವರ್ ನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್: ನಾಲ್ವರ ಸೆರೆ

newsics.com ಬೆಂಗಳೂರು:  ವಿದ್ಯಾರ್ಥಿಗಳಿಗೆ ಚಾಕಲೇಟ್ ಕವರ್ ನಲ್ಲಿ ಅಡಗಿಸಿ ಡ್ರಗ್ಸ್ ಪೂರೈಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ  ಆವಲ ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು  ಮೊಹಮ್ಮದ್ ಅಸ್ಲಾಂ,  ಮೊಹಮ್ಮದ್ ನದೀಂ , ಸಚ್ಚಿಂದ್ರನ್ ಮತ್ತು...
- Advertisement -
error: Content is protected !!