Monday, November 29, 2021

ಕೊರೋನಾ ಟೆಸ್ಟ್ ಕಿಟ್ ಬಳಸದಿರುವುದಕ್ಕೆ ಚೀನಾ ಆಕ್ರೋಶ

Follow Us

ಬೀಜಿಂಗ್: ಚೈನಾ ಮೇಡ್ ಕೊರೋನಾ ಆಂಟಿಬಾಡಿ ಟೆಸ್ಟ್ ಕಿಟ್‌ಗಳ ಬಳಕೆಗೆ ತಡೆಯೊಡ್ಡಿರುವ ಭಾರತ ಸರ್ಕಾರದ ಕ್ರಮಕ್ಕೆ ಚೀನಾ ಆಕ್ರೋಶ ವ್ಯಕ್ತಪಡಿಸಿದೆ.
ಚೀನಾದಿಂದ ತರಿಸಿಕೊಡಿರುವ ಟೆಸ್ಟ್‌ ಕಿಟ್‌ಗಳ ನಿಖರತೆಯಲ್ಲಿ ತುಂಬಾ ವ್ಯತ್ಯಾಸವಿದೆ. ಹೀಗಾಗಿ ಅವುಗಳನ್ನು ಬಳಸದೆ ವಾಪಸ್‌ ಕಳುಹಿಸುವಂತೆ ಐಸಿಎಂಆರ್ ನಿರ್ದೇಶನ ನೀಡಿತ್ತು.
ಐಸಿಎಂಆರ್ ಸೂಚನೆ ಬಗ್ಗೆ ದೆಹಲಿಯಲ್ಲಿರುವ ಚೀನಾ ರಾಯಭಾರ ಕಚೇರಿಯ ವಕ್ತಾರೆ ಜಿ ರೋಂಗ್ ಆಕ್ಷೇಪ ವ್ಯಕ್ತಪಡಿಸಿ, ‘ಕೆಲವು ವ್ಯಕ್ತಿಗಳು ಚೀನಾ ಉತ್ಪನ್ನಗಳಿಗೆ ದೋಷಪೂರಿತ ಎಂದು ಹಣೆಪಟ್ಟಿ ಕಟ್ಟುವುದು ಮತ್ತು ಸಮಸ್ಯೆಗಳನ್ನು ಪೂರ್ವಾಗ್ರಹದಿಂದ ನೋಡುವುದು ಅನ್ಯಾಯ ಮತ್ತು ಬೇಜವಾಬ್ದಾರಿಯುತ’ ಎಂದು ಹೇಳಿದ್ದಾರೆ.
ಸರ್ಕಾರ ನೀಡಿರುವ ಮಾರ್ಗಸೂಚಿಯನ್ನು ಟೆಸ್ಟ್ ಕಿಟ್‌ಗಳ ಸಂಗ್ರಹ, ಸಾಗಾಟದ ವೇಳೆ ಕಂಪನಿಗಳು ಉಲ್ಲಂಘಿಸಿದ್ದರಿಂದ ನಿಖರತೆಯ ಸಮಸ್ಯೆಯಾಗಿರಬಹುದು ಎಂದೂ ಚೀನಾ ರಾಯಭಾರ ಕಚೇರಿ ಹೇಳಿದೆ.

ಮತ್ತಷ್ಟು ಸುದ್ದಿಗಳು

Latest News

ಮಹಿಳಾ ಸಂಸದರೊಂದಿಗೆ ಸೆಲ್ಫಿ ಶೇರ್ ಮಾಡಿ ಲೋಕಸಭೆ ಆಕರ್ಷಕ ಸ್ಥಳ ಎಂದ ಶಶಿ ತರೂರ್, ಕ್ಷಮೆಯಾಚನೆ

newsics.com ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್, ಆರು ಮಹಿಳಾ ಸಂಸದರೊಂದಿಗೆ ತೆಗೆದ ಸೆಲ್ಫಿಯನ್ನು ಹಂಚಿಕೊಂಡಿದ್ದಾರೆ. "ಲೋಕಸಭೆಯು ಕೆಲಸ ಮಾಡಲು ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ?"...

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...
- Advertisement -
error: Content is protected !!