Monday, April 12, 2021

ಚೀನಾ ಘರ್ಷಣೆ; ಮತ್ತೋರ್ವ ಯೋಧ ವೀರಮರಣ

ನವದೆಹಲಿ: ಗಾಲ್ವಾನ್ ಕಣಿವೆಯಲ್ಲಿ ಜೂನ್ 15ರಂದು ನಡೆದ ಭಾರತ ಮತ್ತು ಚೀನಾ ಗಡಿ ಘರ್ಷಣೆಯಲ್ಲಿ ಈಗ ಮತ್ತೊಬ್ಬ ಯೋಧ ಹುತಾತ್ಮರಾಗಿದ್ದಾರೆ. ಇದರೊಂದಿಗೆ ಗಾಲ್ವಾನ್ ಘರ್ಷಣೆಯಲ್ಲಿ ಹುತಾತ್ಮರಾದ ಭಾರತೀಯ ಯೋಧರ ಸಂಖ್ಯೆ 21 ಕ್ಕೆ ಏರಿದೆ.
ಮಹಾರಾಷ್ಟ್ರದ ಮಾಲೆಗಾಂವ್ ತಾಲ್ಲೂಕಿನ ಸಕುರಿ ಗ್ರಾಮದ ನಿವಾಸಿ ಸಚಿನ್ ವಿಕ್ರಮ್ ಮೋರ್ ಗುರುವಾರ ವೀರಮರಣವನ್ನಪ್ಪಿದರು. ಗಾಲ್ವಾನ್‌ನಲ್ಲಿ ಕರ್ತವ್ಯದಲ್ಲಿದ್ದಾಗ ನದಿಗೆ ಬಿದ್ದ ಇಬ್ಬರನ್ನು ರಕ್ಷಿಸಲು ಪ್ರಯತ್ನಿಸಿದ್ದರು. ಆ ಸಂದರ್ಭದಲ್ಲಿ ವಿಕ್ರಮ್ ಅವರಿಗೆ ತೀವ್ರ ಗಾಯಗಳಾಗಿದ್ದವು. ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ವೀರಮರಣವನ್ನಪ್ಪಿದರು ಎಂದು ಮಿಲಿಟರಿ ಮೂಲಗಳು ತಿಳಿಸಿವೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!