Wednesday, November 30, 2022

ದೇವಸ್ಥಾನಕ್ಕೆ ​1 ಕೆಜಿ 16 ತೊಲೆ ಚಿನ್ನ ಅರ್ಪಿಸಿದ ಸಿಎಂ ಕೆಸಿಆರ್

Follow Us

newsics.com

ತೆಲಂಗಾಣ:ಯಾದಾದ್ರಿಯ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ತೆಲಂಗಾಣ ಸಿಎಂ ಕೆಸಿಆರ್​ ​1 ಕೆಜಿ 16 ತೊಲೆ ಚಿನ್ನವನ್ನು ಅರ್ಪಿಸಿದರು.

ದೇವಸ್ಥಾನ ಗೋಪುರಕ್ಕೆ 65 ಕೆಜಿಯಷ್ಟು ಚಿನ್ನದ ಲೇಪನ ಮಾಡಲಾಗುತ್ತಿದೆ. ಇದಕ್ಕೆ ಕಳೆದ ವರ್ಷ ಸಿಎಂ ಕೆಸಿಆರ್​ ಚಿನ್ನವನ್ನು ದೇಣಿಗೆ ನೀಡುವಂತೆ ಕರೆ ನೀಡಿದ್ದರು. ಅಲ್ಲದೇ, ಸ್ವತಃ ತಾವು ಕೂಡ ​1 ಕೆಜಿ 16 ತೊಲೆ ಚಿನ್ನವನ್ನು ಸಮರ್ಪಿಸುವುದಾಗಿ ಘೋಷಿಸಿದ್ದರು. ಅದರಂತೆಯೇ ಇಂದು ಆ ಚಿನ್ನವನ್ನು ಶ್ರೀಗಳಿಗೆ ಸಿಎಂ ಕೆಸಿಆರ್​ ಅರ್ಪಿಸಿದರು.

ಇಂದು ಕುಟುಂಬ ಸಮೇತ ಯಾದಾದ್ರಿಗೆ ಆಗಮಿಸಿದ ಸಿಎಂ ಕೆಸಿಆರ್, ಗೋಪುರದ ಚಿನ್ನದ ಲೇಪನಕ್ಕಾಗಿ ಚಿನ್ನ ಅರ್ಪಿಸಿದರು. ಕೆಸಿಆರ್ ದಂಪತಿಯೊಂದಿಗೆ ಮೊಮ್ಮಗ ಹಿಮಾಂಶು, ಸಚಿವರಾದ ಜಗದೀಶ್ ರೆಡ್ಡಿ, ಇಂದ್ರಕರನ್ ರೆಡ್ಡಿ, ಪ್ರಶಾಂತ್ ರೆಡ್ಡಿ ಸೇರಿದಂತೆ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!