Wednesday, July 6, 2022

ಕಮಿಷನ್ ಕೇಳಿದ ಆರೋಪ: ಆರೋಗ್ಯ ಸಚಿವ ವಜಾ, ಬಂಧನ

Follow Us

newsics.com
ಚಂಡಿಗಢ: ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಗ್ಯ ಸಚಿವರನ್ನು ಮುಖ್ಯಮಂತ್ರಿ ಭಗವಂತ ಮಾನ್ ವಜಾಗೊಳಿಸಿದ ಬೆನ್ನಲ್ಲೇ ಪೊಲೀಸರು ಬಂಧಿಸಿದ್ದಾರೆ.
ಪಂಜಾಬ್ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರ ವಿರುದ್ಧ ಶೇ.1ರಷ್ಟು ಕಮಿಷನ್ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಚಿವ ಸಂಪುಟದಿಂದ ಅವರನ್ನು ಮಂಗಳವಾರ ವಜಾಗೊಳಿಸಿದ ತಕ್ಷಣ ಪಂಜಾಬ್ ಪೊಲೀಸರು ಅವರನ್ನು ಬಂಧಿಸಿದ್ದಾರೆ.
ಅಧಿಕಾರಕ್ಕೆ ಬಂದ ಒಂದೇ ತಿಂಗಳಲ್ಲಿ ಈ ಬೆಳವಣಿಗೆ ನಡೆದಿದೆ. ಭ್ರಷ್ಟಾಚಾರ ಆರೋಪದ ಮೇಲೆ ಸಚಿವರ ಮೊದಲ ತಲೆದಂಡವಾಗಿದ್ದು, ಸಂಪುಟದಿಂದ ಕಿತ್ತು ಹಾಕುತ್ತಿದ್ದಂತೆ ಪಂಜಾಬ್‌ ಪೊಲೀಸರು ಸಚಿವರನ್ನು ಬಂಧಿಸಿದ್ದಾರೆ.
ತಮ್ಮ ಇಲಾಖೆಯಲ್ಲಿ ಗುತ್ತಿಗೆ ಪಡೆದ ಅಧಿಕಾರಿಗಳಿಂದ ವಿಜಯ್ ಸಿಂಗ್ಲಾ ಶೇ.1ರಷ್ಟು ಕಮಿಷನ್ ಕೇಳಿದ್ದರು. ಈ ಕುರಿತಾಗಿ ಸಿಎಂ ಭಗವಂತ್ ಮಾನ್ ಅವರಿಗೆ ದೂರು ಬಂದಿತ್ತು. ಬಲವಾದ ಸಾಕ್ಷ್ಯ ಕೂಡ ಲಭ್ಯವಾಗಿತ್ತು.
ಮುಖ್ಯಮಂತ್ರಿಯೊಬ್ಬರು ತಮ್ಮ ಸಚಿವರ ವಿರುದ್ಧ ನೇರ ಕ್ರಮಕ್ಕೆ ಮುಂದಾಗಿರುವುದು ದೇಶದ ಇತಿಹಾಸದಲ್ಲಿ ಇದು ಎರಡನೇ ಬಾರಿ. 2015ರಲ್ಲಿ ಕೇಜ್ರಿವಾಲ್ ಭ್ರಷ್ಟಾಚಾರ ಪ್ರಕರಣದಲ್ಲಿ ತಮ್ಮ ಸಚಿವರೊಬ್ಬರನ್ನು ವಜಾಗೊಳಿಸಿದ್ದು, ದೇಶದ ಮೊದಲ ಪ್ರಕರಣವಾಗಿತ್ತು.
ಶೇಕಡಾ 1ರಷ್ಟು ಭ್ರಷ್ಟಾಚಾರವನ್ನು ಕೂಡ ಸಹಿಸಲು ಸಾಧ್ಯವಿಲ್ಲ ಎಂದು ಸಿಎಂ ಮಾನ್ ಹೇಳಿದ್ದಾರೆ.

ಜ್ಞಾನವಾಪಿ ಮಸೀದಿ ವಿವಾದ : ಮೊದಲು ಮುಸ್ಲಿಂ ಸಮಿತಿ ವರದಿ ಕೈಗೆತ್ತಿಕೊಂಡ ಕೋರ್ಟ್

ವಾಟ್ಸಾಪ್​ನಲ್ಲೇ ಇನ್ಮುಂದೆ ಸಿಗಲಿದೆ ಪಾನ್​ಕಾರ್ಡ್​, ಡ್ರೈವಿಂಗ್​ ಲೈಸೆನ್ಸ್​​​ ದಾಖಲೆ

ಕೇರಳದ ಯುವವೈದ್ಯೆ ಆತ್ಮಹತ್ಯೆ ಪ್ರಕರಣ : ಪತಿಗೆ 10 ವರ್ಷ ಜೈಲು, ₹12.5 ಲಕ್ಷ ದಂಡ

ಮತ್ತಷ್ಟು ಸುದ್ದಿಗಳು

vertical

Latest News

ಅವಧಿಗೂ ಮುನ್ನವೇ ಖೈದಿಗಳ ಬಿಡುಗಡೆ : ಕೇಂದ್ರ

newsics.com ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ...

ಸಾವಿರ ಕೋಟಿಯ ಗುರೂಜಿ ದಾರುಣ ಅಂತ್ಯ

newsics.com ಹುಬ್ಬಳ್ಳಿ; ವಾಸ್ತು ಶಾಸ್ತ್ರ  ಹೇಳುವ ಮೂಲಕ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶಾದ್ಯಂತ ಚಿರಪರಿಚಿತರಾಗಿದ್ದ ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಅವರನ್ನು ಇಂದು (ಜು.5) ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಆಸ್ತಿ...

ದಿಢೀರ್ ಶಬ್ದದಿಂದ ಭೂಮಿ ಸೀಳು, ಭಯಭೀತರಾದ ಶಿವಮೊಗ್ಗ ಮಂದಿ

newsics.com ಶಿವಮೊಗ್ಗ: ದಿಢೀರ್ ಶಬ್ದದಿಂದ ಭೂಮಿ ಸೀಳಾಗಿರುವ ಘಟನೆ ಸಾಗರದ ನೆಹರು ನಗರದಲ್ಲಿ ನಡೆದಿದೆ. ಒಮ್ಮೆಲೆ ಬಂದ ಶಬ್ದಕ್ಕೆ ನೆಹರು ನಗರದ ನಿವಾಸಿಗಳು ಭಯಭೀತರಾಗಿ ಹೊರಗೆ ಬಂದು ನೋಡಿದರೆ, ಭೂಮಿ ಸೀಳಾಗಿರುವುದು ಕಂಡು ಬಂದಿದೆ. ಭೂಮಿಯಿಂದ...
- Advertisement -
error: Content is protected !!