newsics.com
ಎರ್ನಾಕುಳಂ: ಮದುವೆಯಾದ ಬಳಿಕ ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವ ಪ್ರವೃತ್ತಿ ಇರುವವರಿಗೆ ಕೇರಳ ಹೈಕೋರ್ಟ್ ಎಚ್ಚರಿಕೆ ನೀಡಿದೆ.
ನೀನು ಅವರಷ್ಟು ಸುಂದರವಾಗಿಲ್ಲ ಎಂದು ಮೂದಲಿಸುತ್ತಿದ್ದರೆ ಅದು ಮಾನಸಿಕ ಕ್ರೌರ್ಯ ಎಂದು ಕೇರಳ ಹೈಕೋರ್ಟ್ ತೀರ್ಪು ನೀಡಿದೆ.
ವಿವಾಹ ವಿಚ್ಛೇದನ ಕುರಿತ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಅನಿಲ್ ಕೆ ನರೇಂದ್ರನ್ ಮತ್ತು ಸಿ ಎ ಎಸ್ ಸುಧಾ ಅವರನ್ನು ಒಳಗೊಂಡ ಪೀಠ ಈ ತೀರ್ಪು ನೀಡಿದೆ.
ಮದುವೆಯಾದ ಬಳಿಕ ನೀನು ನನ್ನ ನಿರೀಕ್ಷೆಗೆ ತಕ್ಕಂತೆ ಇಲ್ಲ ಎಂದು ಜರಿದರೆ ಕೂಡ ಅದು ಪತಿ ಎಸಗುವ ಮಾನಸಿಕ ಕ್ರೌರ್ಯಕ್ಕೆ ಸಮ ಎಂದು ಹೈಕೋರ್ಟ್ ಹೇಳಿದೆ.