newsics.com
ನವದೆಹಲಿ: ಆರ್ಯನ್ ಗುರಿಯಾಗಲು ಖಾನ್ ಸರ್ ನೇಮ್ ಕಾರಣ ಎಂದಿದ್ದ ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ ವಿರುದ್ಧ ದೂರು ದಾಖಲಾಗಿದೆ.
ದೆಹಲಿ ಮೂಲದ ವಕೀಲರು ದೂರು ದಾಖಲಿಸಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್ ಬಂಧನಕ್ಕೆ ಸಂಬಂಧಿಸಿದಂತೆ ಮೆಹಬೂಬಾ ಮುಫ್ತಿ ಅವರ ಹೇಳಿಕೆಯ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ವಕೀಲರು ಕೇಳಿದ್ದಾರೆ.
“ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ನನ್ನ ಕೇವಲ ಸರ್ ನೇಮ್ ಖಾನ್ ಎಂದು ಇರುವುದಕ್ಕೆ ಕೇಂದ್ರದ ತನಿಖಾ ಸಂಸ್ಥೆಗಳು ಗುರಿಯಾಗಿಸಿಕೊಂಡಿದೆ. ಬಿಜೆಪಿಯು ತನ್ನ ಮತ ಬ್ಯಾಂಕ್ ತುಂಬಿಸಿಕೊಳ್ಳಲು ಮುಸ್ಲಿಮರನ್ನು ಟಾರ್ಗೆಟ್ ಮಾಡುತ್ತಿದೆ” ಎಂದು ಮೆಹಬೂಬಾ ಮುಫ್ತಿ ಹೇಳಿಕೆ ನೀಡಿದ್ದರು.
“ಸಮುದಾಯಗಳ ನಡುವೆ ದ್ವೇಷವನ್ನು ಸೃಷ್ಟಿಸುವ ಉದ್ದೇಶವನ್ನು ಪ್ರಚೋದಿಸುವ ಹೇಳಿಕೆ” ಅವರದ್ದು ಎಂದು ದೂರಿನಲ್ಲಿ ಆರೋಪಿಸಲಾಗಿದೆ.