Tuesday, April 13, 2021

ಕೇರಳದಲ್ಲಿಂದು ಸಂಪೂರ್ಣ ಲಾಕ್ ಡೌನ್

ತಿರುವನಂತಪುರಂ: ಮಾರಕ ಕೊರೋನಾ ನಿಯಂತ್ರಿಸುವ ನಿಟ್ಟಿನಲ್ಲಿ ಕೇರಳ ಸರ್ಕಾರ ಭಾನುವಾರ ಎಲ್ಲ ರೀತಿಯ ಚಟುವಟಿಕೆ ನಿಷೇಧಿಸಿದೆ. ಈ ನಿಷೇಧ ಹಸಿರು, ಕಿತ್ತಳೆ ಮತ್ತು ಕೆಂಪು ವಲಯಗಳಲ್ಲಿ ಅನ್ವಯವಾಗಲಿದೆ.  ಎಲ್ಲ ವಿಧದ ಖಾಸಗಿ ವಾಹನಗಳ  ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಅಗತ್ಯ ಸೇವೆ ಹೊರತುಪಡಿಸಿ ಉಳಿದ ಎಲ್ಲ ಅಂಗಡಿ ಭಾನುವಾರ ಮುಚ್ಚಲು ಆದೇಶ ನೀಡಲಾಗಿದೆ. ಕೊರೋನಾ ನಿಯಂತ್ರಣಕ್ಕೆ ಬರುವ ತನಕ ರಾಜ್ಯದಲ್ಲಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಜಾರಿಗೆ ನಿರ್ಧರಿಸಲಾಗಿದೆ. ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ಕೊರೋನಾ ವರದಿಯಾದ 100 ದಿನಗಳ ಬಳಿಕ ಇದನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ. ಇದೀಗ ವಿದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಕೇರಳಿಯರು ರಾಜ್ಯಕ್ಕೆ ಹಿಂತಿರುಗುತ್ತಿರುವ ಹಿನ್ನೆಲೆಯಲ್ಲಿ  ಮುನ್ನೆಚ್ಚರಿಕೆ ವಹಿಸಲು ನಿರ್ಧರಿಸಲಾಗಿದೆ. ಕೊರೋನಾ ಕೇರಳದಲ್ಲಿ ನಾಲ್ಕು ಮಂದಿಯನ್ನು ಬಲಿ ಪಡೆದುಕೊಂಡಿದೆ.

ಮತ್ತಷ್ಟು ಸುದ್ದಿಗಳು

Latest News

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೋಂ ಕ್ವಾರಂಟೈನ್

newsics.com ಲಕ್ನೋ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೊಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಮುಖ್ಯಮಂತ್ರಿ ಕಚೇರಿಯ ಕೆಲವು ಸಿಬ್ಬಂದಿಯಲ್ಲಿ ಕೊರೋನಾ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಮುಂಜಾಗ್ರತಾ...

ಬೆಂಗಳೂರಿನಲ್ಲಿ 5500 ಕೊರೋನಾ ಸೋಂಕು, ರಾಜ್ಯದಲ್ಲಿ 8778 ಪ್ರಕರಣ, 67 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಯುಗಾದಿ ದಿನದಂದು ಕೂಡ ಕೊರೋನಾ ಅಬ್ಬರ ಮುಂದುವರಿದಿದೆ. ರಾಜ್ಯದಲ್ಲಿ ಹೊಸದಾಗಿ 8778 ಮಂದಿಗೆ ಕೊರೋನಾ ಸೋಂಕು ತಗುಲಿದೆ.  ಬೆಂಗಳೂರಿನಲ್ಲಿ ಹೊಸದಾಗಿ 5500 ಕೊರೋನಾ ಪ್ರಕರಣ ವರದಿಯಾಗಿದೆ. ರಾಜ್ಯದಲ್ಲಿ ಕೊರೋನಾ ಒಂದೇ ದಿನ...

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ ನಿವಾಸಿ 58 ಡಯಾಲಿಸಿಸ್'ಗೆ ಬಂದಿದ್ದ ಮಹಿಳೆಗೆ...
- Advertisement -
error: Content is protected !!