ನವದೆಹಲಿ: ಸಂವಿಧಾನದ 370ನೇ ವಿಧಿ ರದ್ದುಪಡಿಸಿದ ಬಳಿಕ ಜನರಿಗೆ ಉಂಟಾಗಿರುವ ಪ್ರಯೋಜನಗಳ ಬಗ್ಗೆ ಮನವರಿಕೆ ಮಾಡಿಕೊಡಲು ಕೇಂದ್ರ ಸಚಿವರ ತಂಡ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡುವುದನ್ನು ಕಾಂಗ್ರೆಸ್ ಲೇವಡಿ ಮಾಡಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ಮೊದಲು ಕಾನೂನು ರಚಿಸಲಾಗುತ್ತದೆ. ಆ ಬಳಿಕ ಜನರ ಬೆಂಬಲ ಪಡೆಯುವ ಯತ್ನ ಮಾಡುತ್ತಿದೆ ಎಂದು ಹೇಳಿದೆ. ಕೇಂದ್ರ ಸಚಿವರಿಗೆ ಅನುಮತಿ ನೀಡಲಾಗುತ್ತದೆ. ಪ್ರತಿಪಕ್ಷ ನಾಯಕರಿಗೆ ಯಾವಾಗ ಅವಕಾಶ ನೀಡುತ್ತೀರಿ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.