newsics.com
ನವದೆಹಲಿ: ಉತ್ತರಪ್ರದೇಶದ ಲಖೀಂಪುರದಲ್ಲಿ ನಡೆದ ಹಿಂಸಾಚಾರ ಖಂಡಿಸಿ ಕಾಂಗ್ರೆಸ್ ನಿಯೋಗ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಮನವಿ ಪತ್ರ ಸಲ್ಲಿಸಲಿದೆ.
ಏಳು ಸದಸ್ಯರನ್ನು ಒಳಗೊಂಡ ಕಾಂಗ್ರೆಸ್ ನಿಯೋಗ ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಲಿದೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ, ಹಿರಿಯ ನಾಯಕರಾದ ಎ ಕೆ ಆ್ಯಂಟನಿ, ಕೆ ಸಿ ವೇಣುಗೋಪಾಲ್, ಇದರಲ್ಲಿ ಸೇರಿದ್ದಾರೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ನಿಯೋಗ ರಾಷ್ಟ್ರಪತಿ ಅವರನ್ನು ಭೇಟಿ ಮಾಡಲಿದೆ.