newsics.com
ಬೆಂಗಳೂರು: ಬಿಪಿಎಲ್‍ಗೆ ಡಿಮ್ಯಾಂಡ್ ಹೆಚ್ಚಾಗುತ್ತಿದ್ದು, ಮೇ 14 ರಿಂದ 20ರವರೆಗೆ 6 ದಿನಗಳಲ್ಲಿ ಬರೋಬ್ಬರಿ 78 ಸಾವಿರ ಅರ್ಜಿಗಳನ್ನು ಸಲ್ಲಿಸಲಾಗಿದೆ.
ಮುಂದಿನ ತಿಂಗಳು ಗ್ಯಾರಂಟಿ ಜಾರಿಯಾಗಲಿರುವ ಲಕ್ಷಣಗಳು ಕಾಣಿಸುತ್ತಿದ್ದಂತೆ ಜನರು ಬಿಪಿಎಲ್ ಕಾರ್ಡ್‍ಗೆ ಅರ್ಜಿ ಸಲ್ಲಿಸುತ್ತಿದ್ದಾರೆ. ಒಟ್ಟು ಆರು ತಿಂಗಳಲ್ಲಿ 2 ಲಕ್ಷದ 88 ಸಾವಿರ ಅರ್ಜಿಗಳು ಸಲ್ಲಿಕೆಯಾಗಿದ್ದು, ಈಗ ಮತ್ತೆ ದಿಢೀರ್ ಏರಿಕೆಯಾಗಿದೆ. ಆದರೆ ಬಿಪಿಎಲ್ ಕಾರ್ಡ್ ಮಿತಿಯನ್ನು ಕರ್ನಾಟಕ ದಾಟಿದೆ. ಕೇಂದ್ರ ಸರ್ಕಾರದ ಸಬ್ಸಿಡಿ ಪಡೆಯಲು ಈ ಮಿತಿ ಬಹಳ ಮುಖ್ಯವಾಗಿದೆ.
ರಾಜ್ಯದಲ್ಲಿ 4.01 ಕೋಟಿ ಜನರಿಗೆ ಮಾತ್ರ ಬಿಪಿಎಲ್ ಸೌಲಭ್ಯ ಕೊಡಬಹುದು. ಆದರೆ ಈಗಾಗಲೇ 30 ಲಕ್ಷ ಹೆಚ್ಚುವರಿ ಬಿಪಿಎಲ್ ಕಾರ್ಡ್‍ಗಳಿವೆ. ಅದ್ದರಿಂದ ಹೊಸದಾಗಿ ಬಂದಿರುವ ಅರ್ಜಿಗಳ ಪರಿಶೀಲನೆ ನಡೆಸಲಾಗುತ್ತದೆ. ಅರ್ಹತೆಗಳ ಆಧಾರದಲ್ಲಿ ಜೂನ್ ಮೊದಲ ವಾರ ಹೊಸ ಅರ್ಜಿಗಳ ವಿಲೇವಾರಿ ಮಾಡಲಾಗುವುದು ಎಂದು ನಾಗರಿಕ ಸರಬರಾಜು ಇಲಾಖೆ ಅಧಿಕಾರಿ ಜ್ಞಾನೇಂದ್ರ ತಿಳಿಸಿದ್ದಾರೆ.