Thursday, December 9, 2021

ಕಾಂಗ್ರೆಸ್‌ ನಾಯಕನ ಕೊಲೆ: ಪತ್ನಿಯ ಸ್ಥಿತಿ ಗಂಭೀರ

Follow Us

newsics.com

ಜಾರ್ಖಂಡ್‌: ಕಾಂಗ್ರೆಸ್ ನಾಯಕನನ್ನು ದುಷ್ಕರ್ಮಿಗಳ ತಂಡ ಹೊಡೆದು ಕೊಂದಿರುವ ಘಟನೆ ಜಾರ್ಖಂಡ್‌ ನ ರಾಮ್ ಗಢದಲ್ಲಿ ನಡೆದಿದೆ. ರಾಮ್ ಗಢ ಜಿಲ್ಲಾ ಕಾಂಗ್ರೆಸ್‌ ನ ಮಾಜಿ ಪ್ರಧಾನ ಕಾರ್ಯದರ್ಶಿ ಕಮಲೇಶ್‌ ನಾರಾಯಣ ಶರ್ಮಾ ಕೊಲೆಯಾದ ವ್ಯಕ್ತಿ.

ದುಷ್ಕರ್ಮಿಗಳು ಶರ್ಮಾ ಅವರ ಪತ್ನಿ ಚಂಚಲಾ ಶರ್ಮಾ ಮೇಲೆಯೂ ಹಲ್ಲೆ ನಡೆಸಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಕಿಟಕಿ ಮೂಲಕ ಮನೆಯ ಒಳಗೆ ಪ್ರವೇಶಿಸಿದ ಅಪರಿಚಿತ ವ್ಯಕ್ತಿಗಳು ಕಬ್ಬಿಣದ ರಾಡ್‌ ನಿಂದ ಹೊಡೆದು ಶರ್ಮಾ ಅವರನ್ನು ಕೊಲೆ ಮಾಡಿದ್ದಾರೆ. ಹತ್ಯೆಯ ಹಿಂದಿನ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.

ಕೇರಳದಲ್ಲಿ ಭಾರೀ ಮಳೆಗೆ 3 ಸಾವು: 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!