newsics.com
ಗುವಾಹಟಿ: ಅಸ್ಸಾಂ ವಿಧಾನಸಭೆಗೆ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ರೂಪ್ ಜ್ಯೋತಿ ಕುರ್ಮಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವಿಧಾನಸಸಭೆ ಸ್ಪೀಕರ್ ಬಿಸ್ವಜಿತ್ ದೈಮರಿ ಅವರನ್ನು ಭೇಟಿ ಮಾಡಿದ ಶಾಸಕ ಜ್ಯೋತಿ ಕುರ್ಮಿ , ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಅವರು ಶಾಸಕರಾಗಿ ಆಯ್ಕೆಯಾಗಿದ್ದರು. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಎಐಯುಡಿಎಫ್ ಜತೆ ಮೈತ್ರಿ ಮಾಡಿ ತಪ್ಪು ಮಾಡಿದೆ ಎಂದು ಕುರ್ಮಿ ಆರೋಪಿಸಿದ್ದಾರೆ.
ಪಕ್ಷದಲ್ಲಿ ಕೇವಲ ಹಿರಿಯರಿಗೆ ಮಾತ್ರ ಆದ್ಯತೆ ನೀಡಲಾಗುತ್ತಿದೆ. ಯುವಕರನ್ನು ಕಾಂಗ್ರೆಸ್ ಕಡೆಗಣಿಸುತ್ತಿದೆ ಎಂದು ಅವರು ಟೀಕಿಸಿದ್ದಾರೆ.