ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಗೆ ಮೊದಲಿನಿಂದಲೂ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್, ಪಕ್ಷದ ಆಡಳಿತವಿರುವ ರಾಜಸ್ತಾನ, ಮಧ್ಯಪ್ರದೇಶ ಮತ್ತು ಛತ್ತೀಸ್ ಗಢ ರಾಜ್ಯಗಳಲ್ಲಿ ಸಿಎಎ ಜಾರಿಗೊಳಿಸುವುದಿಲ್ಲ ಎಂಬ ನಿರ್ಣಯ ಹೊರತರಲು ಮುಂದಾಗಿದೆ.
ಸಿಎಎ ಕಾಯ್ದೆ ಮುಸ್ಲಿಮರ ವಿರೋಧಿಯಾಗಿದ್ದು, ಸಂವಿಧಾನದ ಜಾತ್ಯತೀತ ನೀತಿಗೆ ವಿರುದ್ಧವಾಗಿದೆ ಎಂದಿರುವ ಹಿರಿಯ ಕಾಂಗ್ರೆಸ್ ನಾಯಕ ಅಹಮದ್ ಪಟೇಲ್, ಪಂಜಾಬ್ ನಂತರ ಉಳಿದ ಕಾಂಗ್ರೆಸ್ ಆಡಳಿತ ರಾಜ್ಯಗಳಲ್ಲಿ ಸಿಎಎ ವಿರೋಧಿಸಿ ನಿರ್ಣಯ ಮಂಡಿಸಲಾಗುವುದು ಎಂದಿದ್ದಾರೆ.