newsics.com
ನವದೆಹಲಿ: ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ2022 ಸೆಪ್ಟೆಂಬರ್ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ದೆಹಲಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ. ಆದರೆ ಕಾಂಗ್ರೆಸ್ ಈ ಸಂಬಂಧ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ.
ಇದೇ ವೇಳೆ ಪಕ್ಷದ ಆಂತರಿಕ ವಿಚಾರಗಳನ್ನು ಮಾಧ್ಯಮಗಳ ಮೂಲಕ ಚರ್ಚೆ ಮಾಡುತ್ತಿರುವುದಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜಿ- 23 ಗುಂಪಿನ ಕಾರ್ಯ ವೈಖರಿಗೆ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಯೊಬ್ಬರಿಗೂ ಅಭಿಪ್ರಾಯ ವ್ಯಕ್ತಪಡಿಸುವ ಸ್ವಾತಂತ್ರ್ಯ ಇದೆ. ಆದರೆ ಅದು ಪಕ್ಷದ ವೇದಿಕೆಯಲ್ಲಿ ನಡೆಯಬೇಕು ಎಂದು ಸೋನಿಯಾ ಗಾಂಧಿ ಸ್ಪಷ್ಟಪಡಿಸಿದ್ದಾರೆ.