newsics.com
ನವದೆಹಲಿ: ಬಿಹಾರದಲ್ಲಿ ಕಾಂಗ್ರೆಸ್- ಆರ್ ಜೆಡಿ ಸರ್ಕಾರ ಬರಲಿದೆ ಎಂದು ಇಂಡಿಯಾ ಟುಡೇ -ಆಕ್ಸಿಸ್ ಮೈ ಇಂಡಿಯಾ ಚುನಾವಣಾ ಪೂರ್ವ ಸಮೀಕ್ಷೆ ಹೇಳಿದೆ.
ಈ ಮೂಲಕ ನಾಲ್ಕನೇ ಬಾರಿಗೆ ಸಿಎಂ ಆಗುವ ಕನಸು ಕಾಣುತ್ತಿರುವ ನಿತೀಶ್ ಕುಮಾರ್ ಅವರ ಕನಸು ಭಗ್ನವಾಗಲಿದ್ದು, ಮಹಾಘಟನಂಧನ್ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್ ಅವರು ಸಿಎಂ ಆಗುವ ಸಾಧ್ಯತೆಯಿದೆ ಎಂದು ಸಮೀಕ್ಷೆ ಹೇಳಿದೆ.
ಕೊರೊನಾ ಸೋಂಕು ಹರಡುವಿಕೆ ಆತಂಕದ ನಡುವೆಯೂ ಬಿಹಾರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಸಲಾಗಿದ್ದು, ನ.7 ರಂದು ಮೂರನೇ ಹಾಗೂ ಅಂತಿಮ ಹಂತದ ಮತದಾನ ಮುಕ್ತಾಯವಾಗಿದೆ.
243 ಸ್ಥಾನ (122 ಮ್ಯಾಜಿಕ್ ನಂಬರ್)
ಮಹಾಘಟಬಂಧನ್: 139 ರಿಂದ 161, 39% ಮತ ಗಳಿಕೆ
ಎನ್ಡಿಎ: 69 ರಿಂದ 61, 44%
ಎಲ್ ಜೆಪಿ: 3 ರಿಂದ 5, 7%
ಜಿಡಿಎಸ್ ಎಫ್: 3 ರಿಂದ 5, 4%
243 ಸದಸ್ಯ ಬಲ ಹೊಂದಿರುವ ಬಿಹಾರ ವಿಧಾನಸಭೆ ಅವಧಿಯು ನವೆಂಬರ್ 29 ರಂದು ಕೊನೆಗೊಳ್ಳಲಿದೆ. ಅಕ್ಟೋಬರ್ 28ರಂದು 16 ಜಿಲ್ಲೆಗಳ 71 ಕ್ಷೇತ್ರಗಳಿಗೆ 31,000 ಮತಗಟ್ಟೆಗಳಲ್ಲಿ ಮೊದಲ ಹಂತದಲ್ಲಿ ಚುನಾವಣೆ, ನವೆಂಬರ್ 3ರಂದು ಎರಡನೆಯ ಹಂತದಲ್ಲಿ 17 ಜಿಲ್ಲೆಗಳಲ್ಲಿ 94 ಕ್ಷೇತ್ರಗಳಿಗೆ 42,000 ಮತಗಟ್ಟೆಗಳಲ್ಲಿ ಚುನಾವಣೆ, ನವೆಂಬರ್ 7ರಂದು ಮೂರನೇ ಹಂತದಲ್ಲಿ 78 ಕ್ಷೇತ್ರಗಳಿಗೆ 1 ಜಿಲ್ಲೆಗಳಲ್ಲಿ ಅಂದಾಜು 33,500 ಮತಗಟ್ಟೆಗಳಲ್ಲಿ ಚುನಾವಣೆ ನಡೆಸಲಾಯಿತು. ಅಂತಿಮವಾಗಿ ನವೆಂಬರ್10ರಂದು ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬೀಳಲಿದೆ.
2015ರಲ್ಲಿ ರಾಷ್ಟ್ರೀಯ ಜನತಾ ದಳ 80 ಸ್ಥಾನ, ಜನತಾ ದಳ ಯುನೈಟೆಡ್ 71, ಕಾಂಗ್ರೆಸ್ 27 ಗಳಿಸಿದ್ದವು. ಬಿಜೆಪಿ 53 ಸ್ಥಾನ, ಎಲ್ ಜೆಪಿ 2 ಹಾಗೂ ಹಿಂದೂಸ್ತಾನಿ ಅವಾಮ್ ಮೋರ್ಚಾ ಸೆಕ್ಯುಲರ್ 1, ಇತರೆ 10 ಸ್ಥಾನ ಗಳಿಸಿದ್ದವು.
ನಾಲ್ಕು ಚಕ್ರ ವಾಹನಗಳಿಗೆ ಇನ್ನು ಫಾಸ್ಟ್ ಟ್ಯಾಗ್ ಕಡ್ಡಾಯ
ಒಂದೇ ದಿನ ರಾಜ್ಯದಲ್ಲಿ 2258 ಮಂದಿಗೆ ಸೋಂಕು, 22 ಜನ ಬಲಿ