newsics.com
ಕರ್ನೂಲ್: ಆಂಧ್ರಪ್ರದೇಶದಲ್ಲಿ ಕಲುಷಿತ ನೀರು ಸೇವಿಸಿದ ಪರಿಣಾಮ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ತರಾಗಿದ್ದು ಅವರಿಗೆ ಚಿಕಿತ್ಸೆ ನೀಡಲಾಗಿದೆ.
ಪನಯಂ ಬ್ಲಾಕ್ ವ್ಯಾಪ್ತಿಗೆ ಒಳಪಟ್ಟ ಗೋರಕಲ್ಲು ಸಮೀಪದ ಮಾರಮ್ಮ ದುರ್ಗಮ್ಮ ಜಾತ್ರೆಗೆ ಬಂದಿದ್ದ ಭಕ್ತರು ಅಲ್ಲಿ ನೀರು ಕುಡಿದ ಬಳಿಕ ಅಸ್ವಸ್ಥರಾಗಿದ್ದರು.
ನೀರಿನ ಟ್ಯಾಂಕ್ ಶುಚೀಕರಿಸದ ಕಾರಣ ಈ ದುರಂತ ಸಂಭವಿಸಿದೆ ಎಂದು ವರದಿಯಾಗಿದೆ. ಮೃತಪಟ್ಟ ಮೂವರು ನಂದ್ಯಾಲ್ ನವರಾಗಿದ್ದಾರೆ. ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.