Monday, April 12, 2021

ಮಹಾರಾಷ್ಟ್ರದಲ್ಲಿಂದು 120 ಮಂದಿ ಬಲಿ, 2,259 ಜನರಿಗೆ ಸೋಂಕು

ಮುಂಬೈ: ಮಹಾರಾಷ್ಟ್ರದಲ್ಲಿ ಮಂಗಳವಾರ ಒಂದೇ ದಿನ 120 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 3,289ಕ್ಕೆ ಏರಿಕೆಯಾಗಿದೆ.
2,259 ಹೊಸ ಕೊರೋನಾ ವೈರಸ್ ಕೇಸ್​ಗಳು ಪತ್ತೆಯಾಗಿವೆ. ಈ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 90,787ಕ್ಕೆ ಏರಿಕೆಯಾಗಿದೆ. ಮುಂಬೈ ಒಂದರಲ್ಲೇ ಒಟ್ಟು 51,100 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 1,760 ರೋಗಿಗಳು ಸಾವನ್ನಪ್ಪಿದ್ದಾರೆ. ಮಂಗಳವಾರ ಮಹಾರಾಷ್ಟ್ರದಲ್ಲಿ ಪತ್ತೆಯಾಗಿರುವ ಕೊರೋನಾ ಕೇಸುಗಳು ಇದುವರೆಗಿನ ಅತ್ಯಧಿಕ ಪ್ರಮಾಣದ್ದಾಗಿದೆ.
ತಮಿಳುನಾಡಿನಲ್ಲೂ ಮಂಗಳವಾರ ಅತ್ಯಧಿಕ ಕೊರೋನಾ ಕೇಸ್​ಗಳು ಪತ್ತೆಯಾಗಿವೆ. ತಮಿಳುನಾಡಿನಲ್ಲಿ ಮಂಗಳವಾರ 21 ಜನರು ಸಾವನ್ನಪ್ಪಿದ್ದು, 1,685 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ತಮಿಳುನಾಡಿನಲ್ಲಿ ಸೋಂಕಿತರ ಸಂಖ್ಯೆ 34,914ಕ್ಕೆ ಏರಿಕೆಯಾಗಿದೆ. ಚೆನ್ನೈ ಒಂದರಲ್ಲೇ ಒಟ್ಟು 1,243 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!