newsics.com
ನವದೆಹಲಿ: ದೇಶದಲ್ಲಿ ಕೊರೋನಾದ ಅಬ್ಬರ ಮುಂದುವರಿದಿದೆ. ಮೂರು ಲಕ್ಷಕ್ಕಿಂತ ಹೆಚ್ಚು ಮಂದಿಗೆ ಒಂದೇ ದಿನ ಸೋಂಕು ಪ್ರಕರಣ ಮುಂದುವರಿದಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 3,06,064 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.
ಕೊರೋನಾ ಸೋಂಕಿತರಾಗಿದ್ದ 2,43,495 ಮಂದಿ ಇದೇ ಅವಧಿಯಲ್ಲಿ ಗುಣಮುಖರಾಗಿದ್ದಾರೆ. ಈ ಬೆಳವಣಿಗೆ ಮಧ್ಯೆ ದೇಶದಲ್ಲಿ ಸಕ್ರಿಯ ಕೊರೋನಾ ಪ್ರಕರಣದ ಸಂಖ್ಯೆ 22 ಲಕ್ಷ ಮೀರಿದೆ.
ದೇಶದ ವಿವಿಧ ಆಸ್ಪತ್ರೆಗಳಲ್ಲಿ, 22,49,335 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆಗಳಲ್ಲಿ 439 ಜನರು ಮೃತಪಟ್ಟಿದ್ದಾರೆ.