Monday, April 12, 2021

ಜಾರಿ ನಿರ್ದೇಶನಾಲಯದ ಕೇಂದ್ರ ಕಚೇರಿಗೂ ತಟ್ಟಿದ ಕೊರೋನಾ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಸೇರಿದಂತೆ ಮಹತ್ವದ ಪ್ರಕರಣಗಳ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯಕ್ಕೂ ಕೊರೋನಾದ ಭೀತಿ ಎದುರಾಗಿದೆ. ನವದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಾಯದ ಆರು ಅಧಿಕಾರಿಗಳಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ವರದಿಯಾಗಿದೆ. ಇದು ಆತಂಕಕ್ಕೆ ಕಾರಣವಾಗಿದೆ. ಈ ಆರು ಅಧಿಕಾರಿಗಳ ಜತೆ ಸಂಪರ್ಕಕ್ಕೆ ಬಂದಿದ್ದ ಇತರ 10 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಸೀಲ್ ಡೌನ್ ಸೇರಿದಂತೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ.. ಇತ್ತೀಚೆಗೆ ಅರೆ ಸೇನಾಪಡೆಯಿಂದ  ಜಾರಿ ನಿರ್ದೇಶನಾಲಯದಲ್ಲಿ ಎರವಲು ಸೇವೆಯಲ್ಲಿದ್ದ ಕಿರಿಯ ಅಧಿಕಾರಿಯೊಬ್ಬರಲ್ಲಿ ಕೊರೋನಾ ಸೋಂಕು ಕಂಡು ಬಂದಿತ್ತು. ಆ ಬಳಿಕ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿತ್ತು. ವಾರದಲ್ಲಿ ಎರಡು ಬಾರಿ ಸ್ಯಾನಿಟೈಸ್ ಮಾಡಲಾಗುತ್ತಿತ್ತು. ಅಗತ್ಯ ಸಿಬ್ಬಂದಿಗೆ ಮಾತ್ರ ಕಚೇರಿಗೆ ಬರಲು ಸೂಚಿಸಲಾಗುತ್ತಿತ್ತು.  ಇದೀಗ ಎಲ್ಲ ಮುನ್ನೆಚ್ಚರಿಕೆ ವಹಿಸಿದ್ದರೂ ಸೋಂಕು ಕಂಡು ಬಂದಿರುವುದು ಅಚ್ಚರಿ ಮೂಡಿಸಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!