newsics.com
ತಿರುವನಂತಪುರಂ: ಕೊರೋನಾ ಸೋಂಕು ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ಕೆರಲ್ ರಾಜ್ಯದಲ್ಲಿ ನಾಳೆಯಿಂದ (ಅ.3) ಅ.31 ರವರೆಗೆ 144 ಸೆಕ್ಷನ್ ಜಾರಿಗೊಳಿಸಿದೆ.
ಈ ಬಗ್ಗೆ ಕೇರಳ ಸರ್ಕಾರ ಆದೇಶ ಹೊರಡಿಸಿದೆ. ಸೆಕ್ಷನ್ 144 ಪ್ರಕಾರ ಸಾರ್ವಜನಿಕ ಸ್ಥಳದಲ್ಲಿ ಐದು ಜನರಿಗಿಂತ ಹೆಚ್ಚು ಮಂದಿ ಗುಂಪುಗೂಡುವಂತಿಲ್ಲ. ಈ ಆದೇಶ ಅ.3ರಿಂದ ಜಾರಿಯಾಗಲಿದ್ದು, ಅಕ್ಟೋಬರ್ 31ರವರೆಗೆ ಮುಂದುವರಿಯಲಿದೆ.
ಅತೀ ಹೆಚ್ಚು ಜನರು ಗುಂಪುಗೂಡುವುದರಿಂದ ಈ ಕೋವಿಡ್ ಮಾರಕ ಸೋಂಕು ಕ್ಷಿಪ್ರವಾಗಿ ಹರಡಲಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಗುರುವಾರ ತಡರಾತ್ರಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಶ್ವಾಸ್ ಮೆಹ್ತಾ ಬಿಡುಗಡೆ ಮಾಡಿರುವ ಆದೇಶದಲ್ಲಿ ತಿಳಿಸಲಾಗಿದೆ.
ಆಯಾ ಜಿಲ್ಲೆಗಳಲ್ಲಿನ ಸ್ಥಿತಿ, ಗತಿಯ ಬಗ್ಗೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಪರಿಶೀಲಿಸಿ, ಸೋಂಕು ತಡೆಗಟ್ಟಲು ಬೇಕಾದ ಅಗತ್ಯ ಕ್ರಮ ಮತ್ತು ಸೆಕ್ಷನ್ 144 ಜಾರಿಗೊಳಿಸಬೇಕಾಗಿದೆ ಎಂದು ಸರ್ಕಾರ ಹೇಳಿದೆ. ಕೇರಳದಲ್ಲಿ ಗುರುವಾರದ ಮಾಹಿತಿ ಪ್ರಕಾರ, 8,135 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು 2 ಲಕ್ಷಕ್ಕೂ ಅಧಿಕ ಕೋವಿಡ್ ಪ್ರಕರಣ ವರದಿಯಾಗಿದೆ. ರಾಜ್ಯದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 771ಕ್ಕೆ ಏರಿಕೆಯಾಗಿದೆ.
ಕೊರೋನಾ ಕೇಸ್ ಹೆಚ್ಚಳ; ಕೇರಳದಲ್ಲಿ ನಾಳೆಯಿಂದ ನಿಷೇಧಾಜ್ಞೆ
Follow Us