newsics.com
ನವದೆಹಲಿ: ಕಳೆದ ಎರಡು ವಾರಗಳಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುವಲ್ಲಿ ಕರ್ನಾಟಕದ ಐದು ಜಿಲ್ಲೆಗಳಲ್ಲಿ ವರದಿಯಾಗಿರುವ ಪ್ರಕರಣ ಕೂಡ ಕಾರಣ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಕಳವಳ ವ್ಯಕ್ತಪಡಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚಿನ ಕೊರೋನಾ ಪ್ರಕರಣ ವರದಿಯಾಗಿದೆ. ಇದು ಆತಂಕ ಮೂಡಿಸಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.
ಈ ಜಿಲ್ಲೆಗಳನ್ನು ಕಳವಳಕಾರಿ ಜಿಲ್ಲೆಗಳ ಪಟ್ಟಿಗೆ ಸೇರಿಸಲಾಗಿದೆ. ಅಗತ್ಯ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದು ಆರೋಗ್ಯ ಇಲಾಖೆ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ತಿಳಿಸಿದ್ದಾರೆ.