newsics.com
ಮುಂಬೈ: ಮಹಾರಾಷ್ಟ್ರದಲ್ಲಿ ಕೊರೋನಾದ ಅಬ್ಬರ ತೀವ್ರವಾಗಿದೆ. ಕಳೆದ 24 ಗಂಟೆಯಲ್ಲಿ ಮಹಾರಾಷ್ಟ್ರದಲ್ಲಿ ಹೊಸದಾಗಿ 6218 ಮಂದಿಗೆ ಕೊರೋನಾ ಸೋಂಕು ಕಂಡು ಬಂದಿದೆ. ಮಹಾರಾಷ್ಟ್ರದಲ್ಲಿ 5869 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ.
ಮಹಾರಾಷ್ಟ್ರದಲ್ಲಿ ಹೊಸದಾಗಿ 51 ಮಂದಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದಲ್ಲಿ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 51 857ಕ್ಕೆ ಏರಿದೆ. ಮಹಾರಾಷ್ಟ್ರದಲ್ಲಿ 53 409 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಕೇರಳದಲ್ಲಿ ಕಳೆದ 24 ಗಂಟೆಯಲ್ಲಿ 4034 ಕೊರೋನಾ ಪ್ರಕರಣ ವರದಿಯಾಗಿದೆ. ಕೇರಳದಲ್ಲಿ 69604 ಮಂದಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದೆ. ಇವರಲ್ಲಿ ಶೇಕಡ 5.80 ಮಂದಿಯಲ್ಲಿ ರೋಗ ಲಕ್ಷಣ ಕಂಡು ಬಂದಿದೆ.
ಕೇರಳದಲ್ಲಿ ಕೊರೋನಾದಿಂದ 14 ಮಂದಿ ಸಾವನ್ನಪ್ಪಿದ್ದಾರೆ. ಕೊರೋನಾದಿಂದ ಕೇರಳದಲ್ಲಿ ಸಾವನ್ನಪ್ಪಿದವರ ಸಂಖ್ಯೆ 4119ಕ್ಕೆ ಏರಿದೆ. ಕಾಸರಗೋಡಿನಲ್ಲಿ ಹೊಸದಾಗಿ 140 ಮಂದಿಯಲ್ಲಿ ಕೊರೋನಾ ಸೋಂಕು ಕಂಡು ಬಂದಿದೆ.