Tuesday, April 13, 2021

24 ಗಂಟೆಯೊಳಗೆ 134 ಮಂದಿಯ ಬಲಿಪಡೆದ ಕೊರೋನಾ

ನವದೆಹಲಿ: ಮಾರಕ ಕೊರೋನಾ ಕಳೆದ 24 ಗಂಟೆ ಅವಧಿಯಲ್ಲಿ 134 ಮಂದಿಯ ಪ್ರಾಣ ಅಪಹರಿಸಿದೆ. ಇದರೊಂದಿಗೆ ದೇಶದಲ್ಲಿ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ 2549ಕ್ಕೆ ಏರಿದೆ. ಇದೇ ಅವಧಿಯಲ್ಲಿ ಹೊಸದಾಗಿ 3722 ಹೊಸ ಪ್ರಕರಣ ವರದಿಯಾಗಿದೆ.  ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 78,003 ತಲುಪಿದೆ. ಇವರಲ್ಲಿ 49 219 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 26 235 ಮಂದಿ ಗುಣಮುಖರಾಗಿದ್ದಾರೆ. ಚೆನ್ನೈ ಮಹಾನಗರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮುಂಬೈ, ಚೆನ್ನೈ, ಅಹಮ್ಮದಾಬಾದ್ , ಇಂಧೋರ್ ನಲ್ಲಿ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ. ಈ ಮಧ್ಯೆ ದೆಹಲಿಯಲ್ಲಿ ಮೆಟ್ರೋ ರೈಲು ಸಂಚಾರ ಪುನರಾರಂಭಕ್ಕೆ ಸಿದ್ದತೆ ನಡೆಯುತ್ತಿದೆ. ರೈಲು ನಿಲ್ದಾಣಗಳಲ್ಲಿ ಶುಚಿತ್ವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!