newsics.com
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 14,146 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದೀಗ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 3,40,67,719 ಕ್ಕೆ ತಲುಪಿದೆ.
ಕಳೆದ 24 ಗಂಟೆಯಲ್ಲಿ ಕೊರೋನಾದಿಂದ 44 ಮಂದಿ ಮೃತಪಟ್ಟಿದ್ದಾರೆ. ಮಾರಕ ಕೊರೋನಾ ಇದುವರೆಗೆ 4,52,124 ಮಂದಿಯ ಪ್ರಾಣ ಅಪಹರಿಸಿದೆ.
ಕೊರೋನಾ ಸೋಂಕಿತರಾಗಿದ್ದ, 3,34,19,749, ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ 1,95,846 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶನಿವಾರ ಕೊರೋನಾ ಸೋಂಕಿತರಾಗಿದ್ದ 19,788 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಇದುವರೆಗೆ 97,65,89,540 ಮಂದಿಗೆ ಕೊರೋನಾ ತಡೆ ಲಸಿಕೆ ನೀಡಲಾಗಿದೆ