Monday, April 12, 2021

ಮಹಾರಾಷ್ಟ್ರದಲ್ಲಿ ಒಂದೇ ದಿನ 6555 ಪ್ರಕರಣ, 151 ಮಂದಿ ಬಲಿ

ಮುಂಬೈ: ಮಾರಕ ಕೊರೋನಾ ಮಹಾರಾಷ್ಟ್ರದಲ್ಲಿ ಅಟ್ಟಹಾಸ ಮೆರೆಯುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ಮಹಾರಾಷ್ಟ್ರದಲ್ಲಿ ಹೊಸದಾಗಿ 6555 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ2, 06,619ಕ್ಕೆ ತಲುಪಿದೆ.  ಒಂದೇ ದಿನದಲ್ಲಿ  151 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಕೊರೋನಾ ಮಹಾರಾಷ್ಟ್ರದಲ್ಲಿ ಇದುವರೆಗೆ 8822 ಮಂದಿಯ ಪ್ರಾಣ ಅಪಹರಿಸಿದೆ. ಮುಂಬೈ ಮಹಾನಗರದಲ್ಲಿ  ಹೊಸದಾಗಿ 1311 ಮಂದಿಗೆ ಕೊರೋನಾ ಸೋಂಕು ತಗುಲಿದೆ. 69 ಮಂದಿ ಕಳೆದ 24 ಗಂಟೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಮುಂಬೈ ನಗರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇದೀಗ 84, 125ಕ್ಕೆ ತಲುಪಿದೆ. ಮುಂಬೈ ನಗರದಲ್ಲಿ ಕೊರೋನಾಕ್ಕೆ ಇದುವರೆಗೆ 4896 ಮಂದಿ ಬಲಿಯಾಗಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!