Saturday, April 17, 2021

ದೇಶದಲ್ಲಿ 24 ಗಂಟೆಯಲ್ಲಿ ಕೊರೋನಾಕ್ಕೆ 2003 ಮಂದಿ ಬಲಿ

ನವದೆಹಲಿ: ಮಾರಕ ಕೊರೋನಾ ದೇಶದಲ್ಲಿ ಒಂದೇ ದಿನ 2003 ಮಂದಿಯನ್ನು ಬಲಿಪಡೆದುಕೊಂಡಿದೆ. ಇದು ಇದುವರೆಗಿನ ಅತ್ಯಧಿಕ ಸಂಖ್ಯೆಯಾಗಿದೆ. ಹೊಸದಾಗಿ 10, 974 ಮಂದಿಗೆ ಕೊರೋನಾ ಸೋಂಕು ತಗುಲಿದೆ. ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 3, 54, 065ಕ್ಕೆ ಏರಿದೆ. ಕೊರೋನಾ ಒಂದೇ ದಿನ ಎರಡು ಸಾವಿರ ಮಂದಿಯ ಬಲಿ ಪಡೆದಿರುವುದು ಆತಂಕ ಮೂಡಿಸಿದೆ. ಮಾರಕ ಕೊರೋನಾ ದೇಶದಲ್ಲಿ ಬಲಿಪಡೆದವರ ಸಂಖ್ಯೆ ಇದೀಗ 11, 903ಕ್ಕೆ ತಲುಪಿದೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ 1, 55, 227 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇದೇ ವೇಳೆ ಕೊರೋನಾದಿಂದ ಗುಣಮುಖರಾದವರ ಸಂಖ್ಯೆ1, 86, 935ಕ್ಕೆ ಏರಿದೆ. ಮಹಾರಾಷ್ಟ್ರದಲ್ಲಿ ಅತ್ಯಧಿಕ ಸಂಖ್ಯೆಯ ಕೊರೋನಾ ಪ್ರಕರಣ ವರದಿಯಾಗಿದೆ

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!