ಮುಂಬೈ: ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಕೊರೋನಾ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಕಳೆದ 24 ಗಂಟೆಯಲ್ಲಿ ಮುಂಬೈಯಲ್ಲಿ 1837 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಕೊರೋನಾ ಸೋಂಕಿತರ ಸಂಖ್ಯೆ 1, 86, 150ಕ್ಕೆ ತಲುಪಿದೆ. ಕೊರೋನಾ ಸೋಂಕಿತ 1, 50, 535 ಮಂದಿ ಗುಣಮುಖರಾಗಿದ್ದಾರೆ.
ಮುಂಬೈ ಯಲ್ಲಿ ಒಂದೇ ದಿನದಲ್ಲಿ ಕೊರೋನಾ 36 ಮಂದಿಯನ್ನು ಬಲಿಪಡೆದುಕೊಂಡಿದೆ. ಇದರೊಂದಿಗೆ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ 8502ಕ್ಕೆ ತಲುಪಿದೆ. ಇದೇ ವೇಳೆ ಒಂದೇ ದಿನದಲ್ಲಿ 2728 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ