Monday, October 3, 2022

ಒಂದೇ ದಿನ 45, 903 ಮಂದಿಗೆ ಕೊರೋನಾ ಸೋಂಕು, 490 ಬಲಿ

Follow Us

Newsics.com

ನವದೆಹಲಿ: ದೇಶದಲ್ಲಿ  ಕೊರೋನಾದ ಅಬ್ಬರ  ನಿಂತಿಲ್ಲ. ಕಳೆದ 24 ಗಂಟೆ ಅವಧಿಯಲ್ಲಿ 45,903  ಮಂದಿಗೆ ಕೊರೋನಾ ಸೋಂಕು ಕಂಡು ಬಂದಿದೆ. ಇದರೊಂದಿಗೆ ಕೊರೋನಾ ಸೋಂಕಿತರ ಸಂಖ್ಯೆ ದೇಶದಲ್ಲಿ 85,53, 657ಕ್ಕೆ ತಲುಪಿದೆ.

ಕೊರೋನಾ ಮಹಾಮಾರಿ ಒಂದೇ ದಿನ 490  ಮಂದಿಯ ಪ್ರಾಣ ಅಪಹರಿಸಿದೆ. ಕೊರೋನಾದಿಂದ ದೇಶದಲ್ಲಿ ಮೃತಪಟ್ಟವರ ಸಂಖ್ಯೆ 1, 26, 611ಕ್ಕೆ ತಲುಪಿದೆ.

ದೇಶದ ವಿವಿಧ ಆಸ್ಪತ್ರೆಗಳಲ್ಲಿ 5, 09, 673 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಒಂದೇ ದಿನ ಕೊರೋನಾ ಸೋಂಕಿತರಾಗಿದ್ದ 48, 405 ಮಂದಿ ಗುಣಮುಖರಾಗಿದ್ದಾರೆ. ಕೊರೋನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ ಇದೀಗ 79,17, 373 ಕ್ಕೆ ತಲುಪಿದೆ.

ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಾಗಿರುವುದರಿಂದ  ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವವರು ಹೊರಗಡೆ ತೆರಳದಂತೆ ಆರೋಗ್ಯ ಪರಿಣಿತರು ಸಲಹೆ ನೀಡಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!