Saturday, April 17, 2021

ಮುಂಬೈ ನಲ್ಲಿ ಒಂದೇ ದಿನ ಕೊರೋನಾಕ್ಕೆ 53 ಮಂದಿ ಬಲಿ

ಮುಂಬೈ: ವಾಣಿಜ್ಯ ರಾಜಧಾನಿ ಮುಂಬೈಯಿಂದ  ಬೆಂಗಳೂರಿಗೆ ಬರುತ್ತಿರುವ ಎಲ್ಲ ರೈಲುಗಳಲ್ಲಿ ಪ್ರಯಾಣಿಕರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವ ನಿಜವಾದ ಕಾರಣ ಇದೀಗ ಬಹಿರಂಗವಾಗಿದೆ. ಮುಂಬೈ ಮಹಾ ನಗರದಲ್ಲಿ ವ್ಯಾಪಕ ಪ್ರಮಾಣದಲ್ಲಿ ಕೊರೋನಾ ಹರಡುತ್ತಿರುವುದೇ ಇದಕ್ಕೆ ಕಾರಣ.  ಒಂದೇ ದಿನದಲ್ಲಿ ಮುಂಬೈ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೊರೋನಾಕ್ಕೆ 53 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹೊಸತಾಗಿ  1150 ಪ್ರಕರಣ ದೃಢಪಟ್ಟಿದೆ,  ಮುಂಬೈ ಮಹಾನಗರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 45, 854ಕ್ಕೆ ಏರಿದೆ. ಕೊರೋನಾದಿಂದ ಮಹಾ ನಗರಿ ಮುಂಬೈಯಲ್ಲಿ ಇದುವರೆಗೆ 1518 ಮಂದಿ ಮೃತಪಟ್ಟಿದ್ದಾರೆ. ಇದು ಮುಂಬೈ ಮಹಾನಗರದ ಪರಿಸ್ಥಿತಿಯ ಗಂಭೀರತೆಯನ್ನು ಸೂಚಿಸುತ್ತಿದೆ

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!