Wednesday, October 5, 2022

ಒಂದೇ ದಿನ 44, 878 ಮಂದಿಗೆ ಕೊರೋನಾ ಸೋಂಕು,547 ಬಲಿ

Follow Us

Newsics.com

ನವದೆಹಲಿ: ದೇಶದಲ್ಲಿ  ಕೊರೋನಾದ  ಅಬ್ಬರ  ಮುಂದುವರಿದಿದೆ. ಕಳೆದ 24 ಗಂಟೆ ಅವಧಿಯಲ್ಲಿ  44,878 ಮಂದಿಯಲ್ಲಿ  ಕೊರೋನಾ ಸೋಂಕು ದೃಢಪಟ್ಟಿದೆ.  ಕೊರೋನಾ ಸೋಂಕಿತರ ಸಂಖ್ಯೆ ದೇಶದಲ್ಲಿ  87,28,795ಕ್ಕೆ ತಲುಪಿದೆ.

ಕೊರೋನಾ ಮಹಾಮಾರಿ ಒಂದೇ ದಿನ 547  ಮಂದಿಯ ಪ್ರಾಣ ಬಲಿಪಡೆದಿದೆ. ಕೊರೋನಾದಿಂದ ದೇಶದಲ್ಲಿ ಮೃತಪಟ್ಟವರ ಸಂಖ್ಯೆ ಇದೀಗ  1, 28, 688ಕ್ಕೆ ತಲುಪಿದೆ.

ಕೊರೋನಾ ಸೋಂಕಿತರಾಗಿರುವ  4, 84, 547 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೊದಲ ಬಾರಿಗೆ ಕೊರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಐದು ಲಕ್ಷಕ್ಕಿಂತ ಕಡಿಮೆಯಾಗಿದೆ. ಕೊರೋನಾ ಸೋಂಕಿನಿಂದ  ಒಟ್ಟು  81, 15, 580 ಮಂದಿ ಇದುವರೆಗೆ ಗುಣಮುಖರಾಗಿದ್ದಾರೆ.  ಗುರುವಾರ  ಒಂದೇ ದಿನ ಕೊರೋನಾ ಸೋಂಕಿಗೆ ತುತ್ತಾಗಿದ್ದ  49,079 ಮಂದಿ ಗುಣಮುಖರಾಗಿದ್ದಾರೆ.

ಗುರುವಾರ ದೇಶದಲ್ಲಿ 11, 39, 230 ಕೊರೋನಾ ಪರೀಕ್ಷೆ ನಡೆಸಲಾಗಿತ್ತು.

ಸುಡಾನ್ ಗೆ ತೆರಳಿದ ಭಾರತದ ಯೋಧರು: ಶಾಂತಿಪಾಲನಾ ಪಡೆಯಲ್ಲಿ ಸೇವೆ

ಮತ್ತಷ್ಟು ಸುದ್ದಿಗಳು

vertical

Latest News

ಐತಿಹಾಸಿಕ ಜಂಬೂಸವಾರಿಗೆ ಕ್ಷಣಗಣನೆ; ನಗರದಲ್ಲಿ ಬಿಗಿ ಭದ್ರತೆ

newsics.com ಮೈಸೂರು; ಐತಿಹಾಸಿಕ ದಸರಾ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ನಗರದ ಸುತ್ತಮುತ್ತ ಭದ್ರತೆಗಾಗಿ 5 ಸಾವಿರಕ್ಕೂ ಹೆಚ್ಚು ಪೊಲೀಸರನ್ನು,ನಿಯೋಜಿಸಲಾಗಿದೆ. ಸಂಜೆ 05:07 ರಿಂದ 5.18ರ ವರೆಗೆ ಸಲ್ಲುವ...

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...
- Advertisement -
error: Content is protected !!