ಮುಂಬೈ: ಮಾರಕ ಕೊರೋನಾ ವಾಣಿಜ್ಯ ರಾಜಧಾನಿ ಮುಂಬೈಯಲ್ಲಿ ರಣಕೇಕೆ ಮುಂದುವರಿಸಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 1257 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಇದರೊಂದಿಗೆ ಕೊರೋನಾ ಸೋಂಕಿತರ ಸಂಖ್ಯೆ 1,05, 829 ಕ್ಕೆ ತಲುಪಿದೆ
ಮುಂಬೈಯಲ್ಲಿ ಒಂದೇ ದಿನ 55 ಮಂದಿ ಕೊರೋನಾಕ್ಕೆ ಬಲಿಯಾಗಿದ್ದಾರೆ. ಇದರೊಂದಿಗೆ ಕೊರೋನಾಕ್ಕೆ ಪ್ರಾಣ ಕಳೆದುಕೊಂಡವರ ಸಂಖ್ಯೆ 5927ಕ್ಕೆ ಏರಿದೆ. ಏಷ್ಯಾದ ಅತೀ ದೊಡ್ಡ ಕೊಳಗೇರಿ ಧಾರಾವಿಯಲ್ಲಿ ಪರಿಸ್ಥಿತಿ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ.