Monday, October 3, 2022

ಒಂದೇ ದಿನ 45, 674 ಮಂದಿಗೆ ಕೊರೋನಾ ಸೋಂಕು 559 ಬಲಿ

Follow Us

Newsics.com

ನವದೆಹಲಿ: ಕಳೆದ 24 ಗಂಟೆ ಅವಧಿಯಲ್ಲಿ 45,674 ಮಂದಿಗೆ ಕೊರೋನಾ ಸೋಂಕು ಕಂಡು ಬಂದಿದೆ. ಇದರೊಂದಿಗೆ ಕೊರೋನಾ ಸೋಂಕಿತರ ಸಂಖ್ಯೆ ದೇಶದಲ್ಲಿ 85,07, 754ಕ್ಕೆ ತಲುಪಿದೆ.
ಕೊರೋನಾ ಮಹಾಮಾರಿ ಒಂದೇ ದಿನ 559 ಮಂದಿಯ ಪ್ರಾಣ ಅಪಹರಿಸಿದೆ. ಕೊರೋನಾದಿಂದ ದೇಶದಲ್ಲಿ ಮೃತಪಟ್ಟವರ ಸಂಖ್ಯೆ 1, 26, 121ಕ್ಕೆ ತಲುಪಿದೆ.
ದೇಶದ ವಿವಿಧ ಆಸ್ಪತ್ರೆಗಳಲ್ಲಿ 5, 12, 665 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಶನಿವಾರ ಒಂದೇ ದಿನ ಕೊರೋನಾ ಸೋಂಕಿತರಾಗಿದ್ದ 49,082 ಮಂದಿ ಗುಣಮುಖರಾಗಿದ್ದಾರೆ. ಕೊರೋನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ ಇದೀಗ 78, 68, 968ಕ್ಕೆ ತಲುಪಿದೆ.
ರಾಜಧಾನಿ ದೆಹಲಿಯಲ್ಲಿ ಮತ್ತೊಮ್ಮೆ ಕೊರೋನಾ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ವಾಯು ಮಾಲಿನ್ಯ ಕೂಡ ಇದಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ.
ದೆಹಲಿಯ ಜತೆ ಜತೆಗೆ ಕೇರಳದಲ್ಲಿ ಕೂಡ ಕೊರೋನಾ ಸೋಂಕಿನಲ್ಲಿ ಭಾರೀ ಹೆಚ್ಚಳ ಕಂಡು ಬಂದಿದೆ. ಶನಿವಾರ ಕೇರಳದಲ್ಲಿ 7201 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿತ್ತು. 28 ಮಂದಿ ಒಂದೇ ದಿನ ಕೊರೋನಾಕ್ಕೆ ಬಲಿಯಾಗಿದ್ದರು.
ಇದರಲ್ಲಿ 6316 ಮಂದಿಗೆ ಸಂಪರ್ಕದಿಂದ ರೋಗ ತಗುಲಿತ್ತು. ಕೇರಳ ರಾಜ್ಯಪಾಲ ಅರೀಫ್ ಮೊಹಮ್ಮದ್ ಖಾನ್ ಕೂಡ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.
ದೇಶದಲ್ಲಿ ನವೆಂಬರ್ 7ರವರೆಗೆ 11,77,36,791 ಮಾದರಿಗಳ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಶನಿವಾರ 11,94,487 ಮಾದರಿಗಳ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಐಸಿಎಂಆರ್ ಹೇಳಿದೆ.
ಮಹಾರಾಷ್ಟ್ರದಲ್ಲಿ ಶನಿವಾರ 3959 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 17,14,273ಕ್ಕೆ ಏರಿಕೆಯಾಗಿದೆ. ಕರ್ನಾಟಕ 2ನೇ ಸ್ಥಾನದಲ್ಲಿದ್ದು, ಶನಿವಾರ 2,258 ಹೊಸ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 8,44,147. ಸಕ್ರಿಯ ಪ್ರಕರಣಗಳು 33,320. ಆಂಧ್ರ ಪ್ರದೇಶದಲ್ಲಿ 8,40,730. ತಮಿಳುನಾಡಿನಲ್ಲಿ 7,41,488. ಉತ್ತರ ಪ್ರದೇಶದಲ್ಲಿ 4,95,421. ಕೇರಳದಲ್ಲಿ 4,80,670 ಕೋವಿಡ್ ಸೋಂಕಿನ ಪ್ರಕರಣಗಳಿವೆ.

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!