ಮುಂಬೈ: ಮಾರಕ ಕೊರೋನಾ ಮಹಾರಾಷ್ಟ್ರದಲ್ಲಿ ಒಂದೇ ದಿನ ಐವರು ಪತ್ರಕರ್ತರನ್ನು ಬಲಿಪಡೆದುಕೊಂಡಿದೆ. ಆದರೆ ಈ ಸಂಬಂಧ ರಾಜ್ಯ ಸರ್ಕಾರ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಪತ್ರಕರ್ತರು ಕೊರೋನಾ ಪೀಡಿತ ಪ್ರದೇಶಗಳಿಗೆ ವರದಿಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ ಅವರಿಗೆ ಸೋಂಕು ತಗುಲಿದೆ ಎಂದು ವರದಿಯಾಗಿದೆ.
ಶುಕ್ರವಾರ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 10 ಲಕ್ಷ ತಲುಪಿತ್ತು. ಒಂದೇ ದಿನ 24, 886 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಕೊರೋನಾಕ್ಕೆ ಇದುವರೆಗೆ 28, 724 ಮಂದಿ ಬಲಿಯಾಗಿದ್ದಾರೆ