Monday, April 12, 2021

ಕೊರೋನಾಕ್ಕೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಬಲಿ

ಪಣಜಿ:  ಗೋವಾದಲ್ಲಿ ಮಾರಕ ಕೊರೋನಾ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷರ ಬಲಿ ಪಡೆದಿದೆ. ಗೋವಾದ ಮಾಜಿ ಬಿಜೆಪಿ ಅಧ್ಯಕ್ಷ ಮತ್ತು ಮನೋಹರ್ ಪಾರಿಕ್ಕರ್ ಸಚಿವ ಸಂಪುಟದಲ್ಲಿ ಸದಸ್ಯರಾಗಿದ್ದ ಡಾ . ಸುರೇಶ್ ಅಮ್ನೋಕರ್ ಕೊರೋನಾಕ್ಕೆ ಬಲಿಯಾಗಿದ್ದಾರೆ. ಗೋವಾದಲ್ಲಿ ಕೊರೋನಾದಿಂದ ಇದುವರೆಗೆ 8 ಮಂದಿ ಸಾವನ್ನಪ್ಪಿದ್ದಾರೆ. ಸೋಮವಾರ 52  ಪ್ರಕರಣ ದಾಖಲಾಗಿತ್ತು.

1999ರಲ್ಲಿ ಪಾಲೇ ಕ್ಷೇತ್ರದಿಂದ ಸುರೇಶ್ ಅಮ್ನೋಕರ್ ಚುನಾಯಿತರಾಗಿದ್ದರು. ಬಳಿಕ  2002ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು. ಗೋವಾ ಬಿಜೆಪಿ ರಾಜಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಮನೋಹರ್ ಪಾರಿಕ್ಕರ್ ಸಚಿವ ಸಂಪುಟದಲ್ಲಿ ಮಹತ್ವದ ಖಾತೆ ನಿರ್ವಹಿಸಿದ್ದರು. ಆದರೆ ಬಳಿಕ ಅವರು ಬಿಜೆಪಿಗೆ ಗುಡ್ ಬೈ ಹೇಳಿದ್ದರು. ಗೋವಾ ಸುರಕ್ಷಾ ಮಂಚ್ ನಲ್ಲಿ ಗುರುತಿಸಿಕೊಂಡಿದ್ದ ಡಾ. ಸುರೇಶ್ ಅಮ್ನೋಕರ್  ಬಳಿಕ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರು

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!