Tuesday, April 13, 2021

ಕೊರೋನಾಕ್ಕೆ ಪತ್ರಕರ್ತ ಬಲಿ

ಲಕ್ನೊ:  ಮಾರಕ ಕೊರೋನಾಕ್ಕೆ ಪತ್ರಕರ್ತರೊಬ್ಬರು ಬಲಿಯಾಗಿದ್ದಾರೆ. ಇಂದು ಮುಂಜಾನೆ ಆಗ್ರಾದ ಎಸ್ ಎನ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಪತ್ರಕರ್ತರೊಬ್ಬರು ಮಾರಕ ಕೊರೋನಾದಿಂದ ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ಹೇಳಿದೆ. ಆದರೆ ಈ ಸಂಬಂಧ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದೆ.  ಕೊರೋನಾ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ಮೇ 6 ರಂದು ಪತ್ರಕರ್ತ ಆಸ್ಪತ್ರೆಗೆ ದಾಖಲಾಗಿದ್ದ. ಇದೇ ವೇಳೆ, ರಾಜಧಾನಿ ಲಕ್ನೊ ಸೇರಿದಂತೆ ರಾಜ್ಯದ  ಪ್ರಮುಖ ನಗರಗಳಲ್ಲಿ ಕೊರೋನಾ ಹರಡದಂತೆ ಕಟ್ಟು ನಿಟ್ಟಿನ  ಕ್ರಮ ಕೈಗೊಳ್ಳುವಂತೆ  ಮುಖ್ಯಮಂತ್ರಿ  ಯೋಗಿಆದಿತ್ಯನಾಥ್ ಸೂಚಿಸಿದ್ದಾರೆ. ಇನ್ನೊಂದೆಡೆ ದೇಶದ ವಿವಿಧೆಡೆಯಿಂದ ಒಂದು ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಉತ್ತರ ಪ್ರದೇಶಕ್ಕೆ ಹಿಂತಿರುಗುವ ಸಾಧ್ಯತೆಗಳಿದ್ದು ಅವರನ್ನು ಕ್ವಾರಂಟೈನ್ ಗೆ ಗುರಿಪಡಿಸುವುದು ಸರ್ಕಾರಕ್ಕೆ ಸವಾಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!