Saturday, April 17, 2021

ದೇಶದಲ್ಲಿ ಕೊರೋನಾಕ್ಕೆ ಬಲಿ 2206ಕ್ಕೆ ಏರಿಕೆ

ನವದೆಹಲಿ: ಮಾರಕ ಕೊರೋನಾ ದೇಶದಲ್ಲಿ ಬಲಿಪಡೆದವರ ಸಂಖ್ಯೆ 2206ಕ್ಕೆ ಏರಿದೆ. ಕಳೆದ 24 ಗಂಟೆ ಅವಧಿಯಲ್ಲಿ 97 ಮಂದಿ ಕೊರೋನಾಕ್ಕೆ ಪ್ರಾಣ ಕಳೆದುಕೊಂಡಿದ್ದಾರೆ. ಇದೇ ವೇಳೆ ಕೊರೋನಾ ಸೋಂಕಿಗೆ ತುತ್ತಾದವರ ಸಂಖ್ಯೆ 67, 152 ತಲುಪಿದೆ.ಇವರಲ್ಲಿ 20917 ಮಂದಿ ಗುಣಮುಖರಾಗಿದ್ದಾರೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ ಇದೀಗ 44029 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಕೊರೋನಾ ಹೆಚ್ಚಿನ ಸಂಖ್ಯೆಯಲ್ಲಿ ಬಲಿಪಡೆದಿದೆ.  ಗುಜರಾತ್ ಎರಡನೆ ಸ್ಥಾನದಲ್ಲಿದೆ.ಚೆನ್ನೈ ನಗರದಲ್ಲಿ ಆತಂಕ ಸೃಷ್ಟಿಯಾಗಿದ್ದು, ಕಟ್ಟು ನಿಟ್ಟಿನ ಲಾಕ್ ಡೌನ್ ಜಾರಿಗೊಳಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ತ್ರಿಬಲ್ ಟಿ ಸೂತ್ರ ಪಾಲನೆಗೆ ಪ್ರಧಾನಿ ಮೋದಿ ಸಲಹೆ

newsics.com ನವದೆಹಲಿ: ಇಂದಿಲ್ಲಿ (ಏ.17) ನಡೆದ ಕೊರೋನಾ ಹಿನ್ನೆಲೆಯ ಮಹತ್ವದ ಸಭೆಯ ಬಳಿಕ ಪ್ರಧಾನಿ ಮೋದಿಯವರು ತ್ರಿಬಲ್ ಟಿ ಸೂತ್ರ ಅನುಷ್ಠಾನಗೊಳಿಸುವಂತೆ ಸೂಚಿಸಿದ್ದಾರೆ. ದೇಶದಲ್ಲಿ ಅತಿಯಾಗಿ ಹೆಚ್ಚುತ್ತಿರುವ ಕೊರೋನಾ...

ಆಮ್ಲಜನಕ‌ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು

newsics.com ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ. ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ ದಾಖಲಾಗಿದ್ದರು. ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು,...

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...
- Advertisement -
error: Content is protected !!