Tuesday, April 13, 2021

ಕೇರಳದಲ್ಲಿ ಕೊರೋನಾಕ್ಕೆ ಬಲಿ 9ಕ್ಕೆ ಏರಿಕೆ

ತಿರುವನಂತಪುರಂ: ಮಾರಕ ಕೊರೋನಾ ಕೇರಳದಲ್ಲಿ ಮತ್ತೊಂದು ಬಲಿ ಪಡೆದುಕೊಂಡಿದೆ. ಆಲಪುಳದಲ್ಲಿ ಕೊರೋನಾ ಸೋಂಕಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಅಸು ನೀಗಿದ್ದಾರೆ.  ಕೆಲವು ದಿನಗಳ ಹಿಂದೆ ಅವರು ಕೊಲ್ಲಿ ರಾಷ್ಟ್ರದಿಂದ ಕೇರಳಕ್ಕೆ ಹಿಂತಿರುಗಿದ್ದರು. ಇದೇ ವೇಳೆ ಲಾಕ್ ಡೌನ್ ನಿಯಮ ಸಡಿಲಿಕೆ ಮಾಡಿದ ಬಳಿಕ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಕೇರಳಕ್ಕೆ ಮರಳಿ ಬಂದಿದ್ದಾರೆ. ಶುಕ್ರವಾರ ಕೇರಳದಲ್ಲಿ  ಹೊಸದಾಗಿ 62 ಮಂದಿಯಲ್ಲಿ ರೋಗ ಲಕ್ಷಣ ಕಾಣಿಸಿಕೊಂಡಿದೆ. ಕಾಸರಗೋಡಿನಲ್ಲಿ 4 ಕೊರೋನಾ ಪ್ರಕರಣ ದೃಢಪಟ್ಟಿದೆ. ಇವರೆಲ್ಲರೂ ಇತರ ರಾಜ್ಯಗಳಿಂದ ಕಾಸರಗೋಡಿಗೆ ಬಂದವರಾಗಿದ್ದಾರೆ. ಕೊರೋನಾ ತಡೆಗಟ್ಟುವ ಸಂಬಂಧ ಕೇರಳ- ಕರ್ನಾಟಕ ಗಡಿಯಲ್ಲಿ ತಪಾಸಣೆ ಬಿಗಿಗೊಳಿಸಲಾಗಿದೆ

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!