Newsics.com
ನವದೆಹಲಿ: ಕೊರೊನಾ ನಿರ್ಮೂಲನೆ ನಿಟ್ಟಿನಲ್ಲಿ ಭಾರತ ಮಹತ್ವದ ಯಶಸ್ಸು ದಾಖಲಿಸಿದೆ. ಕಳೆದ 8 ತಿಂಗಳಲ್ಲಿ ಅತಿ ಕಡಿಮೆ ಕೊರೊನಾ ಪ್ರಕರಣ ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ 13,596 ಹೊಸ ಕೊರೊನಾ ಕೇಸ್ಗಳು ದಾಖಲಾಗಿವೆ. ಇದರಲ್ಲಿ ಕೇರಳದ ಪಾಲು ಅತ್ಯಧಿಕ.
ದೇಶದ ವಿವಿಧ ಆಸ್ಪತ್ರೆಗಳಲ್ಲಿ 1,89,694 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಸರಾ ಹಬ್ಬವನ್ನು ದೇಶಾದ್ಯಂತ ಸಂಭ್ರಮದಿಂದ ಆಚರಿಸಲಾಗಿದ್ದು, ಮುಂದಿನ ದಿನಗಳು ನಿರ್ಣಾಯಕವಾಗಿವೆ. ಸಾಮಾಜಿಕ ಅಂತರ ಪಾಲಿಸದಿರುವುದರಿಂದ ಮುಂದಿನ ದಿನಗಳಲ್ಲಿ ಕೊರೊನಾ ಹೆಚ್ಚಾಗುವ ಭೀತಿ ಸಹ ಇದೆ.
ಕಳೆದ 24 ಗಂಟೆಗಳಲ್ಲಿ ಕೊರೊನಾದಿಂದಾಗಿ 166 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.