newsics.com
ನವದೆಹಲಿ: ಕೊರೋನಾ ವೈರಸ್ ಸೋಂಕಿಗೊಳಗಾಗಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಆರೋಗ್ಯ ಸ್ಥಿರವಾಗಿದ್ದು, ಗುರುವಾರ ದೆಹಲಿಯ ಎಲ್ಎನ್ ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎಲ್ಎನ್ಜೆಪಿ ಆಸ್ಪತ್ರೆಗೆ ದಾಖಲಾಗಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಘೆ ಇರುವುದು ಪತ್ತೆಯಾಗಿದ್ದು, ಅವರ ರಕ್ತದ ಪ್ಲೇಟ್ಲೆಟ್ಗಳ ಸಂಖ್ಯೆ ಕುಸಿಯುತ್ತಿದೆ ಎಂದು ಮೂಲಗಳು ತಿಳಿಸಿವೆ.
ಸೆ.14ರಂದು ಸಿಸೋಡಿಯಾ ಅವರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು, ಸದ್ಯ ಮನೀಶ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಮತ್ತು ಅವರು ಒಂದೆರಡು ದಿನಗಳಲ್ಲಿ ಮತ್ತೊಂದು ಕೊರೋನಾ ಪರೀಕ್ಷೆಗೆ ಒಳಗಾಗಲಿದ್ದಾರೆ ಎಂದು ಗುರುವಾರ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ದೆಹಲಿ ಡಿಸಿಎಂಗೆ ಕೊರೋನಾ, ಡೆಂಘೆ; ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥಿರ
Follow Us