Saturday, April 17, 2021

ನಟಿ ನಗ್ಮಾಗೆ ಕೊರೋನಾ ಸೋಂಕು

newsics.com
ನವದೆಹಲಿ: ಹಿರಿಯ ನಟಿ, ಕಾಂಗ್ರೆಸ್ ನಾಯಕಿ ನಗ್ಮಾ ಅವರಿಗೆ ಕೋವಿಡ್ -19 ಸೋಂಕು ತಗುಲಿದೆ.
ಕೊರೋನಾ ಪಾಸಿಟಿವ್ ವರದಿ ಹಿನ್ನೆಲೆಯಲ್ಲಿ ನಗ್ಮಾ ಹೋಂ ಕ್ಯಾರೆಂಟೈನ್‌ನಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಬಗ್ಗೆ ಟ್ವಿಟ್ಟರ್’ನಲ್ಲಿ ಬರೆದುಕೊಂಡಿರುವ ನಗ್ಮಾ, ಏಪ್ರಿಲ್ 2ರಂದು ಕೋವಿಡ್ -19 ಲಸಿಕೆಯ ಮೊದಲ ಡೋಸ್ ಸ್ವೀಕರಿಸಿದರೂ ವೈರಸ್ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ಲಸಿಕೆ ಹಾಕಿಸಿಕೊಂಡವರೂ ಜಾಗೃತವಾಗಿರಿ. ನಾನೀಗ ಹೋಂ‌ ಕ್ವಾರಂಟೈನ್ ನಲ್ಲಿದ್ದೇನೆ ಎಂದು ಹೇಳಿದ್ದಾರೆ.
1990ರಲ್ಲಿ ಸಲ್ಮಾನ್ ಖಾನ್ ಅಭಿನಯದ ‘ಬಾಗೀ’ ಚಿತ್ರದ ಮೂಲಕ ಬಾಲಿವುಡ್ ಪ್ರವೇಶಿಸಿದ್ದ ನಟಿ ನಗ್ಮಾ ಹಲವು ಖ್ಯಾತ  ನಟರೊಂದಿಗೆ ನಟಿಸಿದ್ದಾರೆ. ಕನ್ನಡ, ತೆಲುಗು, ತಮಿಳು, ಭೋಜ್‌ಪುರಿ, ಮಲಯಾಳಂ ಚಿತ್ರಗಳಲ್ಲಿಯೂ ಅಭಿನಯಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!