ತಿರುವನಂತಪುರಂ: ಕೇರಳದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ಅಂತಾರಾಜ್ಯ ಗಡಿಗಳನ್ನು ಬಂದ್ ಮಾಡಿದೆ.
ಜನರ ಅನಗತ್ಯ ಪ್ರಯಾಣ ನಿರ್ಬಂಧಿಸುವುದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ಹೇಳಿದೆ. ಇತ್ತೀಚಿನ ದಿನಗಳಲ್ಲಿ ಕೊವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಕೇರಳ-ತಮಿಳುನಾಡು ಮತ್ತು ಕೇರಳ-ಕರ್ನಾಟಕ ಗಡಿಗಳನ್ನು ಬಂದ್ ಮಾಡಲಾಗಿದ್ದು, ತುರ್ತು ಅಗತ್ಯಗಳಿಗೆ ಮಾತ್ರ ಗಡಿ ಪ್ರವೇಶಿಸಲು ಸರ್ಕಾರ ಅವಕಾಶ ನೀಡಿದೆ.
ವೈದ್ಯಕೀಯ ಮತ್ತು ಅನಿವಾರ್ಯ ಸಂದರ್ಭಗಳನ್ನು ಹೊಂದಿರುವ ಜನರಿಗೆ ಮಾತ್ರ ರಾಜ್ಯ ಪ್ರವೇಶಿಸಲು ಅವಕಾಶವಿರುತ್ತದೆ ಎಂದು ರಾಜ್ಯ ಪೊಲೀಸ್ ಮುಖ್ಯಸ್ಥ ಲೋಕನಾಥ್ ಬೆಹೆರಾ ಹೇಳಿದ್ದಾರೆ.
ಈ ಮಧ್ಯೆ, ಕೇರಳದಲ್ಲಿ ಬುಧವಾರ ಒಂದೇ ದಿನ 1038 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಸಂಪೂರ್ಣ ಲಾಕ್ಡೌನ್ ಜಾರಿಗೊಳಿಸುವ ಬಗ್ಗೆ ಸರ್ಕಾರ ಯೋಚಿಸುವಂತೆ ಮಾಡಿತ್ತು. ಕೇರಳದಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ.
ಕೊರೋನಾ ತೀವ್ರತೆ; ಅಂತಾರಾಜ್ಯ ಗಡಿ ಬಂದ್ ಮಾಡಿದ ಕೇರಳ
Follow Us