Wednesday, September 28, 2022

ಕೊರೋನಾ ಕಾಟ; ಸೆ.23ರಂದು ಕರ್ನಾಟಕ ಸೇರಿ 7 ರಾಜ್ಯಗಳ ಸಿಎಂ ಜತೆ ಮೋದಿ ಸಭೆ

Follow Us

newsics.com
ನವದೆಹಲಿ: ಕೊರೋನಾ ಅಬ್ಬರ ಹೆಚ್ಚಿರುವ ಕರ್ನಾಟಕ ಸೇರಿ ಏಳು ರಾಜ್ಯಗಳ್ ಮುಖ್ಯಮಂತ್ರಿಗಳ ಜತೆ ಪ್ರಧಾನಿ ಮೋದಿ ಸೆ.23 ರಂದು ಪರಿಶೀಲನಾ ಸಭೆ ನಡೆಸಲಿದ್ದಾರೆ.
ಕರ್ನಾಟಕ, ಮಹಾರಾಷ್ಟ್ರ, ದೆಹಲಿ ಮತ್ತು ಉತ್ತರ ಪ್ರದೇಶ ಸೇರಿದಂತೆ ಏಳು ರಾಜ್ಯಗಳ ಮುಖ್ಯಮಂತ್ರಿಗಳು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ರಾಜ್ಯಗಳಲ್ಲಿ ಕೋವಿಡ್‍ನಿಂದ ಉಂಟಾಗಿರುವ ಬಿಕ್ಕಟ್ಟಿನ ಕುರಿತು ಚರ್ಚೆ ನಡೆಸಲಿದ್ದು, ಕೊರೋನಾ ನಿಯಂತ್ರಣಕ್ಕೆ ಕೈಗೊಳ್ಳಬಹುದಾದ ಮತ್ತಷ್ಟು ಪರಿಣಾಮಕಾರಿ ಕ್ರಮಗಳ ಕುರಿತು ಸಮಾಲೋಚನೆ ನಡೆಸಲಿದ್ದಾರೆ.
24 ಗಂಟೆಗಳ ಅವಧಿಯಲ್ಲಿ 92,605 ಹೊಸ ಪ್ರಕರಣಗಳೂ ಸೇರಿ ದೇಶದಲ್ಲಿ ಕೋವಿಡ್ ಪ್ರಕರಣಗಳು 54 ಲಕ್ಷ ಗಡಿ ದಾಟಿರುವ ಹಿನ್ನೆಲೆಯಲ್ಲಿ ಪ್ರಧಾನಿ ಈ ಸಭೆ ಕರೆದಿದ್ದಾರೆ ಎಂದು ತಿಳಿದುಬಂದಿದೆ. ದೇಶದಲ್ಲಿ ಸೋಂಕಿನಿಂದ 86,752 ಜನರು ಸಾವನ್ನಪ್ಪಿದ್ದಾರೆ.
ಕಳೆದ ಆ.11 ರಂದು ಸಭೆ ನಡೆಸಿದ್ದರು. ಈ ಸಭೆಯಲ್ಲಿ ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಪಂಜಾಬ್, ಬಿಹಾರ ಸೇರಿದಂತೆ 10 ಕ್ಕೂ ಹೆಚ್ಚು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಪ್ರತಿನಿಧಿಗಳು ಭಾಗವಹಿಸಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

ಬಸ್- ಟ್ರಕ್ ಮುಖಾಮುಖಿ ಡಿಕ್ಕಿ: 8 ಮಂದಿ ಸಾವು, 25 ಜನರಿಗೆ ಗಾಯ

newsics.com ಲಕ್ನೋ:  ಉತ್ತರಪ್ರದೇಶದ ಲಕೀಂಪುರಿ ಖೇರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬಸ್ ಮತ್ತು ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಮೃತಪಟ್ಟಿದ್ದಾರೆ. ಬಸ್ ನಲ್ಲಿ ಇದ್ದ...

ಪ್ರಿಯತಮೆ ಜತೆ ಜಗಳ: ಟ್ರೈನಿ ಪೊಲೀಸ್ ಕಾನ್ ಸ್ಟೇಬಲ್ ಆತ್ಮಹತ್ಯೆ

newsics.com ಬೆಂಗಳೂರು: ಪ್ರಿಯತಮೆ ಜತೆ  ಜಗಳ ಮಾಡಿಕೊಂಡಿದ್ದ ಟ್ರೈನಿ ಪೊಲೀಸ್ ಕಾನ್ ಸ್ಟೇಬಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಶರಣಾದ ಪೊಲೀಸ್ ಕಾನ್ ಸ್ಟೇಬಲ್ ನನ್ನು ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ  ಚಿಕ್ಕಪ್ಪ ಅಣ್ಣಪ್ಪ ಅಂಬಿ...

ಪಿಎಫ್ಐ ಸಂಘಟನೆ ಮೇಲೆ ನಿಷೇಧ: ಬೆಂಗಳೂರು ಸಹಿತ ರಾಜ್ಯದಲ್ಲಿ ಹೈ ಅಲರ್ಟ್

newsics.com ಬೆಂಗಳೂರು:  ದೇಶದಲ್ಲಿ ಪಿಎಫ್ಐ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ  ಗರಿಷ್ಟ ಮುನ್ನೆಚ್ಚರಿಕೆ ವಹಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಪೊಲೀಸ್ ಮಹಾ ನಿರ್ದೇಶಕ ಸೂದ್ ಅವರು ಈ ಆದೇಶ ನೀಡಿದ್ದಾರೆ. ಮುಸ್ಲಿಂ...
- Advertisement -
error: Content is protected !!