Wednesday, May 25, 2022

ಎಸ್ಪಿಬಿ ಮರಣೋತ್ತರ ಪರೀಕ್ಷೆಯಲ್ಲಿ ಕೊರೋನಾ ನೆಗೆಟಿವ್

Follow Us

♦ ಇಂದು ರಾತ್ರಿ ಅಥವಾ ನಾಳೆ ಬೆಳಗ್ಗೆ ಎಸ್ಪಿಬಿ ಅಂತ್ಯಕ್ರಿಯೆ  

newsics.com
ಚೆನ್ನೈ: ಸಂಗೀತ ದಿಗ್ಗಜ, ಖ್ಯಾತ ಹಿನ್ನೆಲೆ ಗಾಯಕ, ನಟ, ನಿರ್ಮಾಪಕ, ಸಂಗೀತ ನಿರ್ದೇಶಕ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಎಸ್.ಪಿ. ಬಾಲಸುಬ್ರಹ್ಮಣ್ಯಂ (ಡಾ.ಶ್ರೀಪತಿ ಪಂಡಿತಾರಾಧ್ಯುಲ ಬಾಲಸುಬ್ರಹ್ಮಣ್ಯಂ) ಅವರ ಮರಣೋತ್ತರ ಕೊರೋನಾ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ ಎಂದು ಎಂಜಿಎಂ ಆಸ್ಪತ್ರೆ ಮೂಲಗಳು ತಿಳಿಸಿವೆ.
ಇಂದು ಮಧ್ಯಾಹ್ನ 1 ಗಂಟೆ 4 ನಿಮಿಷಕ್ಕೆ ವಿಧಿವಶರಾದ ಎಸ್ಪಿಬಿ ಅವರ ಪಾರ್ಥಿವ ಶರೀರವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದ್ದು, ಪಾರ್ಥಿವ ಶರೀರವನ್ನು ನಿವಾಸಕ್ಕೆ ಸ್ಥಳಾಂತರಿಸಲಾಗಿದೆ. ಇಂದು ರಾತ್ರಿ ಅಥವಾ ನಾಳೆ ಬೆಳಗ್ಗೆ ಎಸ್ಪಿಬಿ ಅವರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಪುತ್ರ ಚರಣ್ ತಿಳಿಸಿದ್ದಾರೆ.
ಮರಣೋತ್ತರ ಕೊರೋನಾ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿರುವುದರಿಂದ ಅವರ ಅಭಿಮಾನಿಗಳು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯುವುದು ಸಾಧ್ಯವಾಗಿದೆ.
ಈ ಮಧ್ಯೆ, ಎಸ್ಪಿಬಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ರಾಜಸ್ಥಾನ ತಂಡವನ್ನು ಮಣಿಸಿ ಫೈನಲ್ಸ್ ಗೆ ಎಂಟ್ರಿಕೊಟ್ಟ ಗುಜರಾತ್

newsics.com ಮುಂಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಐಪಿಎಲ್ 2022ರ ಮೊದಲ ಕ್ವಾಲಿಫಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು 7 ವಿಕೆಟ್‌ಗಳಿಂದ ಭರ್ಜರಿ ಜಯ ಸಾಧಿಸಿ ಫೈನಲ್ಸ್...

ಬಸ್ ನಿಲ್ದಾಣದಲ್ಲಿ ಮಗು ಸಿಕ್ಕ ಪ್ರಕರಣಕ್ಕೆ ಟ್ವಿಸ್ಟ್ : ತನಿಖೆಯಲ್ಲಿ ಬಯಲಾಯ್ತು ಅಕ್ರಮ ಸಂಬಂಧದ ಅಸಲಿಯತ್ತು

newsics.com ಮೈಸೂರು: ಕಳೆದ 15 ದಿನಗಳ ಹಿಂದೆ ರಾಯಚೂರಿನ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಯುವಕನ ಕೈಗೆ ಮಗುವನ್ನು ಕೊಟ್ಟು ಪರಾರಿಯಾದ ಪ್ರಕರಣ ಇದೀಗ ಹೊಸ ತಿರುವನ್ನೇ ಪಡೆದುಕೊಂಡಿದೆ. ಇದೀಗ ಆ ಮಗು ಆತನದ್ದೇ ಎಂದು...

ಪ್ರವಾಸಿಗರನ್ನು ಸ್ಕೂಬಾ ಡೈವಿಂಗ್ ಗೆ ಹೊತ್ತೊಯ್ದ ದೋಣಿ ಮುಳುಗಡೆ; ಇಬ್ಬರು ಸಾವು

newsics.com ಮಹಾರಾಷ್ಟ್ರ: ಸ್ಕೂಬಾ ಡೈವಿಂಗ್ ವೇಳೆ 20 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿಯು ಮುಳುಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ನಡೆದಿದೆ. ಅಷ್ಟೇ ಅಲ್ಲದೇ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಾರಾಷ್ಟ್ರದ...
- Advertisement -
error: Content is protected !!