newsics.com
ನವದೆಹಲಿ: ದೆಹಲಿ ಉಪ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಕೊರೋನಾ ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಸೊಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 14ರಂದು ಆಸ್ಪತ್ರೆ ಸೇರಿದ್ದರು. ಸದ್ಯ ಮನೆಯಲ್ಲಿಯೇ ಪ್ರತ್ಯೇಕವಾಗಿರುವ 48 ವರ್ಷದ ಸಿಸೋಡಿಯಾ ಅವರನ್ನು ರಕ್ತದಲ್ಲಿ ಪ್ಲೇಟ್ಲೆಟ್ ಸಂಖ್ಯೆ ಕಡಿಮೆಯಾಗಿ, ಆಮ್ಲಜನಕದ ಪ್ರಮಾಣ ಪರಿಗಣಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡೆಂಗ್ಯೂ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಅವ್ರಿಗೆ ನಂತರ ಕೊರೋನಾ ಸೋಂಕು ದೃಢಪಟ್ಟಿತ್ತು. ಈಗ ಕೊರೋನಾ ಫಲಿತಾಂಶ ನೆಗೆಟಿವ್ ಆಗಿದ್ದು, ಮ್ಯಾಕ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದು ವಾರ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಕಚೇರಿ ತಿಳಿಸಿದೆ.
ಕೊರೋನಾ ನೆಗೆಟಿವ್; ದೆಹಲಿ ಡಿಸಿಎಂ ಆಸ್ಪತ್ರೆಯಿಂದ ಡಿಸ್ಚಾರ್ಜ್
Follow Us