Thursday, December 2, 2021

ಪ್ಲಾಸ್ಮಾ ಚಿಕಿತ್ಸೆಗೊಳಗಾದ ಕೊರೋನಾ ರೋಗಿ ಸಾವು

Follow Us

ಮುಂಬೈ: ಮಹಾರಾಷ್ಟ್ರದಲ್ಲಿ ಮೊದಲು ಪ್ಲಾಸ್ಮಾ ಚಿಕಿತ್ಸೆಗೊಳಪಟ್ಟ ಕೊರೋನಾ ರೋಗಿಯೊಬ್ಬರು ಮೃತಪಟ್ಟಿದ್ದಾರೆ. 53 ವರ್ಷದ ಕೊರೋನಾ ರೋಗಿ ಇತ್ತೀಚೆಗೆ ಮುಂಬೈನ ಆಸ್ಪತ್ರೆಯೊಂದರಲ್ಲಿ ಪ್ಲಾಸ್ಮಾ ಚಿಕಿತ್ಸೆಗೆ ಗುರಿಯಾಗಿದ್ದರು. ಕೊರೋನಾ ಗುಣಪಡಿಸಲು ಪ್ಲಾಸ್ಮಾ ವಿಧಾನವೇ ಅತ್ಯುತ್ತಮ ಎಂಬ ವಾದ ಕೇಳಿಬರುತ್ತಿರುವಾಗಲೇ ಈ ಸಾವು ಸಂಭವಿಸಿದೆ. ಪ್ಲಾಸ್ಮಾ ಚಿಕಿತ್ಸೆ ಕುರಿತು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಈಗಾಗಲೇ ಎಚ್ಚರಿಕೆ ನೀಡಿದೆ. ಇದು ಪರೀಕ್ಷಾ ಹಂತದಲ್ಲಿದ್ದು, ಎಲ್ಲ ರೋಗಿಗಳನ್ನು ಪ್ಲಾಸ್ಮಾ ಚಿಕಿತ್ಸೆಗೆ ಒಳಪಡಿಸಬಾರದು ಎಂದು ಅದು ಸ್ಪಷ್ಟಪಡಿಸಿದೆ.

ಮತ್ತಷ್ಟು ಸುದ್ದಿಗಳು

Latest News

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌...

ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆ!

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಈ ಕುರಿತು ಮಾಹಿತಿ ನೀಡಿದ್ದಾರೆ. . 66 ವರ್ಷದ...

ಮತ್ತೆ 23 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೋನಾ

newsics.com ಶಿವಮೊಗ್ಗ: ಇಲ್ಲಿನ ಖಾಸಗಿ ನರ್ಸಿಂಗ್ ಕಾಲೇಜಿನ 23 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗುಲಿದೆ. ಕಾಲೇಜಿನ ಉಳಿದ ವಿದ್ಯಾರ್ಥಿಗಳು ಹಾಗೂ ಇತರ ಸಿಬ್ಬಂದಿಗಳನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪರೀಕ್ಷಾ ವರದಿ ಬರಬೇಕಾಗಿದೆ. ಹೀಗಾಗಿ ನಗರದ ಹೊರವಲಯದಲ್ಲಿರುವ ನರ್ಸಿಂಗ್...
- Advertisement -
error: Content is protected !!